tamanvi
ಧಾರ್ಮಿಕ

ಪುತ್ತೂರು: ಡಿಸೆಂಬರಿನಲ್ಲಿ ನಡೆಯಲಿದೆ ಗಿರಿಜಾ ಕಲ್ಯಾಣೋತ್ಸವ | ಶ್ರೀ ಮಹಾಲಿಂಗೇಶ್ವರ ದೇವರಿಗೆ ಫಲಪುಷ್ಪವನ್ನಿಟ್ಟು ಪ್ರಾರ್ಥನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರಿನ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಗಿರಿಜಾ ಕಲ್ಯಾಣೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಶ್ರೀ ಮಹಾಲಿಂಗೇಶ್ವರ ದೇವರ ಮುಂದೆ ಫಲ ಪುಷ್ಪ ಇಟ್ಟು ಪ್ರಾರ್ಥನೆ ಸಲ್ಲಿಸಲಾಯಿತು.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಕಳೆದ ಮೂರು ವರ್ಷ ಲಕ್ಷಾಂತರ ಭಕ್ತರನ್ನು ಜೋಡಿಸಿ ಶ್ರೀನಿವಾಸ ಕಲ್ಯಾಣೋತ್ಸವ ಮಾಡಲಾಗಿತ್ತು. ಈ ಬಾರಿ ಮಹಾಲಿಂಗೇಶ್ವರನ ಪ್ರೀತ್ಯರ್ಥವಾಗಿ ಗಿರಿಜಾ ಕಲ್ಯಾಣೋತ್ಸವವನ್ನು ನಡೆಸಲು ತೀರ್ಮಾನಿಸಿದ್ದು, ಡಿಸೆಂಬರ್ ತಿಂಗಳಲ್ಲಿ ದೇವಾಲಯದ ದೇವರುಮಾರು ಗದ್ದೆಯಲ್ಲಿ ಆಯೋಜಿಸಿರುವ ಐತಿಹಾಸಿಕ ಕ್ಷಣಕ್ಕೆ ಭಕ್ತರು ಸಾಕ್ಷಿಯಾಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ 27ರ ಆದಿತ್ಯವಾರ ಹಿಂದೂ ಬಂಧುಗಳ ಸಭೆ ನಡೆದು ಗಿರಿಜಾ ಕಲ್ಯಾಣೋತ್ಸವ ಸಮಿತಿ ರೂಪುಗೊಳ್ಳಲಿದೆ.

ಇದಕ್ಕೆ ಪೂರ್ವಭಾವಿಯಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಫಲಪುಷ್ಪ ಇಟ್ಟು ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts