ಧಾರ್ಮಿಕ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳ ಹಿನ್ನೆಲೆಯಲ್ಲಿ ದೂರು: ಅ. 16ರಂದು ವಿಚಾರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನೀಡಿರುವ ದೂರುಗಳ ವಿಚಾರಣೆ ಹಿನ್ನೆಲೆಯಲ್ಲಿ ಅ. 16ರಂದು ಬೆಳಿಗ್ಗೆ 11 ಗಂಟೆಗೆ ದೇವಸ್ಥಾನದಲ್ಲಿ ವಿಚಾರಣೆ ನಡೆಯಲಿದೆ.

ದೂರು ಅರ್ಜಿಗಳ ಪರಿಶೀಲನೆಗಾಗಿ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ದೇವಸ್ಥಾನಕ್ಕೆ ಖುದ್ದು ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ (ಇಒ), ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ದೂರುದಾರರು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ. ಅಲ್ಲದೆ, ದೂರಿಗೆ ಸಂಬಂಧಿಸಿದ ಲಿಖಿತ ಹೇಳಿಕೆಗಳು ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ.

ದೇವಸ್ಥಾನದ ಕಾಮಗಾರಿಗಳ ಕುರಿತು ಸ್ವೀಕೃತವಾಗಿರುವ ದೂರನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಸೆ. 25ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ದೇವಳದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ದೂರುದಾರರಿಗೆ ಈ ಹಿಂದೆ ತಿಳಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಅಂದು ವಿಚಾರಣೆ ನಡೆಸಲು ಸಾಧ್ಯವಾಗಿರಲಿಲ್ಲ. ಇದೀಗ ವಿಚಾರಣೆಗೆ ಅ.16ರಂದು ದಿನಾಂಕ ನಿಗದಿಪಡಿಸಲಾಗಿದ್ದು, ಅಂದು ದೂರು ಅರ್ಜಿಗಳ ಕುರಿತು ಪರಿಶೀಲನೆ ನಡೆಯಲಿದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಡಿ. 20ರ ಕಾರ್ಯಕ್ರಮ: ಧರ್ಮಪಾಲನಾಥ ಸ್ವಾಮೀಜಿಯವರಿಗೆ ಆಮಂತ್ರಣ | ಶ್ರೀಗಳಿಗೆ ಸಂಘದ ನೂತನ ಯೋಜನೆಗಳ ವಿವರಣೆ

ಮಂಗಳೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಹಾಗೂ ಸಹ ಸಂಘಟನೆಗಳ ವತಿಯಿಂದ ಡಿಸೆಂಬರ್ 20ರಂದು…

ಕನ್ನಯ ತರವಾಡು ಮನೆಯಲ್ಲಿ ಹೊಸ ಅಕ್ಕಿ ಊಟ: ಸಾಮಾಜಿಕ ಸಮೀಕ್ಷೆಯ ಮಾಹಿತಿ ನೀಡಿದ ಸುಂದರ ಗೌಡ ನಡುಬೈಲು

ಬಡಗನ್ನೂರು ಗ್ರಾಮದ ಕನ್ನಯ ಕುಟುಂಬಸ್ಥರ ತರವಾಡು ಮನೆಯಲ್ಲಿ ಭಾನುವಾರ ಹೊಸಅಕ್ಕಿ ಊಟ ಕಾರ್ಯಕ್ರಮ…

ಧರ್ಮಸ್ಥಳದ ನೆಲ್ಯಾಡಿ ಬೀಡಿನಲ್ಲಿ ಸಾಂಪ್ರದಾಯಿಕ ದೀಪಾವಳಿ ಆಚರಣೆ | ಧರ್ಮದೇವತೆಗಳಿಗೆ ಪರ್ವ ಸೇವೆ, ಬಲಿಯೇಂದ್ರ ಪೂಜೆ

ಧರ್ಮಸ್ಥಳ: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿರುವಂತೆಯೇ,…