ಧಾರ್ಮಿಕ

ಅಳಿಕೆ ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವ

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ: ಅಳಿಕೆ ಸತ್ಯಸಾಯಿ ಶಿಕ್ಷಣ ಸಂಸ್ಥೆಗಳ ಪರವಾಗಿ ಮಂಗಳವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಗೌರವಾರ್ಪಣೆ ಸಲ್ಲಿಸಿದರು.

ಅಳಿಕೆ ಸಂಸ್ಥೆಗಳ ಕಾರ್ಯದರ್ಶಿ, ಚಂದ್ರಶೇಖರ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಅಳಿಕೆಗೂ – ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದ್ದು ಅಳಿಕೆಯ ಸಂಸ್ಥೆಗಳ ಪ್ರಗತಿಗೆ ಹೆಗ್ಗಡೆಯವರ ಕೊಡುಗೆಯನ್ನು ಶ್ಲಾಘಿಸಿ ಅಭಿನಂದಿಸಿದರು. ಅಳಿಕೆಯಲ್ಲಿ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಮಡಿಯಾಲ ನಾರಾಯಣ ಭಟ್ ಅವರ ಸೇವೆಯನ್ನು ಸ್ಮರಿಸಿದ ಅವರು ಇದೇ ನವಂಬರ್ 29ರಂದು ಭಾನುವಾರ ಮಡಿಯಾಲರ ಜನ್ಮಶತಮಾನೋತ್ಸವ ಸಮಾರಂಭ ಆಯೋಜಿಸಲಾಗಿದ್ದು ಅದಕ್ಕೆ ಹೆಗ್ಗಡೆ ಅವರನ್ನು ಆಹ್ವಾನಿಸಿದರು.

ವೀರೇಂದ್ರ ಹೆಗ್ಗಡೆಯವರು ಅಳಿಕೆಯಲ್ಲಿರುವ ಶಿಕ್ಷಣ ಸಂಸ್ಥೆಗಳ ಸೇವೆ, ಸಾಧನೆಯನ್ನು ಶ್ಲಾಘಿಸಿ ಅಭಿನಂದಿಸಿದರು. ಮುಂದೆಯೂ ಎಲ್ಲಾ ಸಂಸ್ಥೆಗಳು ಉತ್ತರೋತ್ತರ ಪ್ರಗತಿಯನ್ನು ಸಾಧಿಸಲೆಂದು ಅವರು ಶುಭ ಹಾರೈಸಿದರು. ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

ಅಳಿಕೆ ಸಂಸ್ಥೆಗಳ ಕಾರ್ಯದರ್ಶಿ ಚಂದ್ರಶೇಖರ್ ಭಟ್ ನೇತೃತ್ವದಲ್ಲಿ ಶಿಕ್ಷಕರು ಮತ್ತು 36 ವಿದ್ಯಾರ್ಥಿಗಳು ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಧರ್ಮಸ್ಥಳದ ನೆಲ್ಯಾಡಿ ಬೀಡಿನಲ್ಲಿ ಸಾಂಪ್ರದಾಯಿಕ ದೀಪಾವಳಿ ಆಚರಣೆ | ಧರ್ಮದೇವತೆಗಳಿಗೆ ಪರ್ವ ಸೇವೆ, ಬಲಿಯೇಂದ್ರ ಪೂಜೆ

ಧರ್ಮಸ್ಥಳ: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿರುವಂತೆಯೇ,…

ಕನ್ನಯ ತರವಾಡು ಮನೆಯಲ್ಲಿ ಹೊಸ ಅಕ್ಕಿ ಊಟ: ಸಾಮಾಜಿಕ ಸಮೀಕ್ಷೆಯ ಮಾಹಿತಿ ನೀಡಿದ ಸುಂದರ ಗೌಡ ನಡುಬೈಲು

ಬಡಗನ್ನೂರು ಗ್ರಾಮದ ಕನ್ನಯ ಕುಟುಂಬಸ್ಥರ ತರವಾಡು ಮನೆಯಲ್ಲಿ ಭಾನುವಾರ ಹೊಸಅಕ್ಕಿ ಊಟ ಕಾರ್ಯಕ್ರಮ…

ಕರಾವಳಿಯ ವಿಶಿಷ್ಟ ಕಾರ್ಯಕ್ರಮವಾಗಿ ಪುತ್ತೂರು ದೀಪೋತ್ಸವ 2026 | ಲೋಗೋ, ಆಮಂತ್ರಣ ಬಿಡುಗಡೆಗೊಳಿಸಿ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…