ಧಾರ್ಮಿಕ

ಡಿ. 20ರ ಕಾರ್ಯಕ್ರಮ: ಧರ್ಮಪಾಲನಾಥ ಸ್ವಾಮೀಜಿಯವರಿಗೆ ಆಮಂತ್ರಣ | ಶ್ರೀಗಳಿಗೆ ಸಂಘದ ನೂತನ ಯೋಜನೆಗಳ ವಿವರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಹಾಗೂ ಸಹ ಸಂಘಟನೆಗಳ ವತಿಯಿಂದ ಡಿಸೆಂಬರ್ 20ರಂದು ನಡೆಯಲಿರುವ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ನ. 25ರಂದು ಸಂಜೆ 6:30ಕ್ಕೆ ಮಂಗಳೂರಿನ ಶಾಖಾ ಮಠದಲ್ಲಿ ಭೇಟಿಯಾಗಿ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿರುವ ನೂತನ ಯೋಜನೆಗಳು ಹಾಗೂ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಸ್ವಾಮೀಜಿಯವರಿಗೆ ವಿವರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸುಂದರ ಗೌಡ ನಡುಬೈಲು, ಪ್ರಧಾನ ಕಾರ್ಯದರ್ಶಿ ಶ್ರೀಧರ ಗೌಡ ಪಾಣತ್ತಿಲ, ಪ್ರಚಾರ ಸಮಿತಿ ಸಂಚಾಲಕ ಯತೀಶ್ ದೇವ, ಯುವ ಸಂಘದ ಗೌರವಾಧ್ಯಕ್ಷ ಅಮರನಾಥ್ ಗೌಡ ಬಪ್ಪಳಿಗೆ ಹಾಗೂ ಯುವ ಸಂಘದ ಅಧ್ಯಕ್ಷ ಪ್ರಶಾಂತ್ ಕೆಮ್ಮಾಯಿ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಕನ್ನಯ ತರವಾಡು ಮನೆಯಲ್ಲಿ ಹೊಸ ಅಕ್ಕಿ ಊಟ: ಸಾಮಾಜಿಕ ಸಮೀಕ್ಷೆಯ ಮಾಹಿತಿ ನೀಡಿದ ಸುಂದರ ಗೌಡ ನಡುಬೈಲು

ಬಡಗನ್ನೂರು ಗ್ರಾಮದ ಕನ್ನಯ ಕುಟುಂಬಸ್ಥರ ತರವಾಡು ಮನೆಯಲ್ಲಿ ಭಾನುವಾರ ಹೊಸಅಕ್ಕಿ ಊಟ ಕಾರ್ಯಕ್ರಮ…

ಧರ್ಮಸ್ಥಳದ ನೆಲ್ಯಾಡಿ ಬೀಡಿನಲ್ಲಿ ಸಾಂಪ್ರದಾಯಿಕ ದೀಪಾವಳಿ ಆಚರಣೆ | ಧರ್ಮದೇವತೆಗಳಿಗೆ ಪರ್ವ ಸೇವೆ, ಬಲಿಯೇಂದ್ರ ಪೂಜೆ

ಧರ್ಮಸ್ಥಳ: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿರುವಂತೆಯೇ,…