ಧಾರ್ಮಿಕ

ಅಂಗಿ ಕಳಚಿ ದೇವಳ ಪ್ರವೇಶ!! ನಾರಾಯಣ ಗುರುಗಳ ತತ್ವ ಉಲ್ಲೇಖಿಸಿ ವಿರೋಧ ವ್ಯಕ್ತಪಡಿಸಿರುವ ಸ್ವಾಮೀಜಿ!!

ದೇವಸ್ಥಾನದೊಳಗೆ ಪ್ರವೇಶಿಸುವಾಗ ಪುರುಷರು ಅಂಗಿ ಕಳಚಿಡುವ ಪದ್ಧತಿ ಅನಿಷ್ಟಕಾರಕ ಎಂದು ಸ್ವಾಮೀಜಿಯೊಬ್ಬರು ಹೇಳಿದ್ದಾರೆ. ಕೇರಳ, ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಈಗಲೂ ಪುರುಷರು ದೇವಸ್ಥಾನಗಳಲ್ಲಿ ದೇವರ ದರ್ಶನ ಪಡೆಯಲು ಅಂಗಿ ಕಳಚಿ ಒಳಗೆ ಹೋಗಬೇಕೆಂಬ ನಿಯಮ ಆಚರಣೆಯಲ್ಲಿದೆ. ಈ ಸಂಪ್ರದಾಯ ನಿಲ್ಲಿಸಬೇಕು ಎಂದು ಕೇರಳದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಹೇಳಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ತಿರುವನಂತಪುರಂ: ದೇವಸ್ಥಾನದೊಳಗೆ ಪ್ರವೇಶಿಸುವಾಗ ಪುರುಷರು ಅಂಗಿ ಕಳಚಿಡುವ ಪದ್ಧತಿ ಅನಿಷ್ಟಕಾರಕ ಎಂದು ಸ್ವಾಮೀಜಿಯೊಬ್ಬರು ಹೇಳಿದ್ದಾರೆ. ಕೇರಳ, ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಈಗಲೂ ಪುರುಷರು ದೇವಸ್ಥಾನಗಳಲ್ಲಿ ದೇವರ ದರ್ಶನ ಪಡೆಯಲು ಅಂಗಿ ಕಳಚಿ ಒಳಗೆ ಹೋಗಬೇಕೆಂಬ ನಿಯಮ ಆಚರಣೆಯಲ್ಲಿದೆ. ಈ ಸಂಪ್ರದಾಯ ನಿಲ್ಲಿಸಬೇಕು ಎಂದು ಕೇರಳದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಹೇಳಿದ್ದಾರೆ.

ಸಮಾಜ ಸುಧಾರಕ ನಾರಾಯಣ ಗುರು ಸ್ಥಾಪಿಸಿದ ಶಿವಗಿರಿ ಮಠದ ವಾರ್ಷಿಕ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಸ್ವಾಮೀಜಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೇವಾಲಯಗಳಿಗೆ ಪ್ರವೇಶಿಸುವ ಸಂದರ್ಭದಲ್ಲಿ ಪುರುಷರಿಗೆ ಶರ್ಟ್ ತೆಗೆಯುವಂತೆ ಹೇಳುವುದು ನಾರಾಯಣ ಗುರುಗಳ ಸಂದೇಶಕ್ಕೆ ವಿರುದ್ಧವಾಗಿದೆ. ಇದು ಸಾಮಾಜಿಕ ಅನಿಷ್ಟ, ಇದನ್ನು ತೆಗೆದು ಹಾಕಬೇಕಾಗಿದೆ. ದೇವಾಲಯಗಳಿಗೆ ಪ್ರವೇಶಿಸುವವರು ಜನಿವಾರ ಧರಿಸಿದ್ದಾರೆಯೇ ಎಂದು ಪರೀಕ್ಷಿಸಲು ಹಿಂದಿನ ಕಾಲದಲ್ಲಿ ಮೇಲಂಗಿ ತೆಗೆಯುವ ಅಭ್ಯಾಸ ರೂಢಿಯಾಯಿತು. ಆದರೆ ನಾರಾಯಣ ಗುರುಗಳಿಗೆ ಸಂಬಂಧಿಸಿದ ಸಂಸ್ಥೆ ಅಡಿಯಲ್ಲಿ ಕರ್ತವ್ಯ ನಿರ್ವಹಿಸುವ ಕೆಲವು ದೇಗುಲಗಳು ಇಂದಿಗೂ ಪುರುಷರಿಗೆ ಮೇಲಂಗಿ ಧರಿಸಿ ದೇಗುಲ ಪ್ರವೇಶವನ್ನು ನಿರ್ಬಂಧಿಸಿವೆ. ಸಂಸ್ಥೆಗಳು ಈ ಬಗ್ಗೆ ಗಮನ ಹರಿಸಬೇಕು ಎಂದಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶ್ರೀಗಳ ಮಾತಿಗೆ ಬೆಂಬಲ ಸೂಚಿಸಿದ್ದು, ಸ್ವಾಮೀಜಿ ತಮ್ಮ ಮಾತಿನ ಮೂಲಕ ಸಾಮಾಜಿಕ ಸುಧಾರಣೆಯ ಸಂದೇಶ ಸಾರಿದ್ದಾರೆ. ಅವರ ಸಲಹೆಗಳು ಸಾಮಾಜಿಕ ಸುಧಾರಣೆಯಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಗುರುವಿನ ಸಂಪ್ರದಾಯವನ್ನು ಎತ್ತಿ ಹಿಡಿಯುವ ಸಲಹೆಯನ್ನು ಸ್ವಾಮಿಗಳು ಮುಂದಿಟ್ಟಿದ್ದಾರೆ. ಯಾರನ್ನೂ ಒತ್ತಾಯಿಸುವ ಅಗತ್ಯವಿಲ್ಲ. ಕಾಲಕ್ಕೆ ತಕ್ಕಂತೆ ಅನೇಕ ಆಚರಣೆಗಳು ಬದಲಾಗಿವೆ ಎಂದು ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಪ್ರಜ್ಞಾ ಆಶ್ರಮದಲ್ಲಿ ನಾರಾಯಣ ಗುರುಗಳ ಜನ್ಮ ದಿನಾಚರಣೆ | ಬಿರುವೆರ್ ಕುಡ್ಲದ ಪುತ್ತೂರು ಘಟಕದಿಂದ ಆಚರಣೆ

ಪುತ್ತೂರು: ಉದಯ್ ಪೂಜಾರಿ ಸಾರಥ್ಯದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಫ್ರೆಂಡ್ಸ್…

ಪುತ್ತೂರಿನಲ್ಲಿ ಆರೋಗ್ಯದ ಕಡೆಗೆ ಯೋಗದ ನಡಿಗೆ | ಎಸ್.ಪಿ.ವೈ.ಎಸ್.ಎಸ್.ನಿಂದ ನಡೆಯುತ್ತಿರುವ ಯೋಗ ಜೀವನ ದರ್ಶನ

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಇದರ ರಾಜ್ಯ ರಾಷ್ಟ್ರೀಯ ಯೋಗ ಶಿಕ್ಷಕರ…