ಧಾರ್ಮಿಕ

ದೇವಸ್ಥಾನಗಳಲ್ಲಿ ಪುರುಷರ ಮೇಲಿದ್ದ ಈ ನಿರ್ಬಂಧ ತೆರವು!!

ಕೇರಳದಲ್ಲಿ ದೇವಸ್ಥಾನ ಪ್ರವೇಶಿಸುವಾಗ ಪುರುಷರು ಮೇಲಂಗಿ ತೆಗೆಯುವುದನ್ನು ಕಡ್ಡಾಯಗೊಳಿಸುವ ಪದ್ಧತಿಯನ್ನು ರದ್ದುಗೊಳಿಸಲು ಕೇರಳ ದೇವಸ್ವಂ ಮಂಡಳಿ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಹೇಳಿದ್ದಾರೆ. 

ಈ ಸುದ್ದಿಯನ್ನು ಶೇರ್ ಮಾಡಿ

ಕೇರಳದಲ್ಲಿ ದೇವಸ್ಥಾನ ಪ್ರವೇಶಿಸುವಾಗ ಪುರುಷರು ಮೇಲಂಗಿ ತೆಗೆಯುವುದನ್ನು ಕಡ್ಡಾಯಗೊಳಿಸುವ ಪದ್ಧತಿಯನ್ನು ರದ್ದುಗೊಳಿಸಲು ಕೇರಳ ದೇವಸ್ವಂ ಮಂಡಳಿ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ(chief minister) ಪಿಣರಾಯಿ ವಿಜಯನ್ (Pinarayi Vijayan) ಹೇಳಿದ್ದಾರೆ. ಕೇರಳ ಸರ್ಕಾರದ ಈ ನಿರ್ಧಾರ ಭಾರೀ ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ.

akshaya college

ಈಗಾಗಲೇ ಮಂಗಳವಾರ ಶಿವಗಿರಿ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮಠದ ಮುಖ್ಯಸ್ಥ ಸಚ್ಚಿದಾನಂದ ಸ್ವಾಮಿ, ‘ಪುರುಷರು ಜನಿವಾರ ಧರಿಸಿದ್ದಾರೆಯೇ ಎಂಬುದನ್ನು ಪರಿಶೀಲಿಸಲು ಮೇಲಂಗಿ ತೆಗೆಯಲು ಹೇಳಲಾಗುತ್ತಿತ್ತು. ಇದು ಸಾಮಾಜಿಕ ಪಿಡುಗು. ಇನ್ನಾದರೂ ಈ ಪದ್ಧತಿ ಕೊನೆಗೊಳಿಸಬೇಕಿದೆ’ ಎಂದು ಆಗ್ರಹಿಸಿದ್ದರು. ಜತೆಗೆ, ಶ್ರೀ ನಾರಾಯಣ ಗುರುಗಳಿಗೆ ಸಂಬಂಧಿಸಿದ ದೇವಸ್ಥಾನಗಳಲ್ಲಿ ಇದನ್ನು ನಿಷೇಧಿಸಲಾಗುವುದು ಎಂದೂ ಹೇಳಿದ್ದರು. ಅದೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶ್ರೀಗಳ ಹೇಳಿಕೆ ಬೆಂಬಲಿಸಿದ್ದರು. ಅದರ ಬೆನ್ನಲ್ಲೇ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಿಣರಾಯಿ ವಿಜಯನ್, ‘ಇಂದು ದೇವಸ್ವಂ ಮಂಡಳಿಯ ಪ್ರತಿನಿಧಿಯೊಬ್ಬರು ನನ್ನನ್ನು ಭೇಟಿಯಾಗಿ ಮೇಲಂಗಿ ತೆಗೆಯುವ ಪದ್ಧತಿ ನಿಷೇಧಿಸುವ ನಿರ್ಧಾರ ಕೈಗೊಳ್ಳುವ ಬಗ್ಗೆ ತಿಳಿಸಿದರು.

ನನಗೂ ಇದು ಉತ್ತಮ ಸಲಹೆಯಂತೆ ಕಂಡಿತು’ ಎಂದರು. ಆದರೆ ರಾಜ್ಯದಲ್ಲಿರುವ 5 ದೇವಸ್ವಂ ಮಂಡಳಿಗಳಾದ ಗುರುವಾಯೂರು, ತಿರುವಾಂಕೂರು, ಮಲಬಾ‌ರ್, ಕೊಚ್ಚಿನ್ ಮತ್ತು ಕೂಡಲಮಾಣಿಕ್ಯಂ ಪೈಕಿ ಯಾವ ಮಂಡಳಿಯವರು ಈ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ವಿಜಯನ್ ಸ್ಪಷ್ಟಪಡಿಸಿಲ್ಲ. ಈ ನಡುವೆ ದೇಗುಲ ಪ್ರವೇಶದ ವೇಳೆ ಮೇಲಂಗಿ ತೆಗೆವ ಕುರಿತು ಚರ್ಚೆಗೆ ಬಿಜೆಪಿ ಆಗ್ರಹಿಸುತ್ತಿರುವ ಬಗ್ಗೆ ಪ್ರಶ್ನಿಸಿದಾಗ, ‘ಇದನ್ನು ಚರ್ಚಿಸುವುದು ಮಂಡಳಿಗಳ ಕೆಲಸ, ಸರ್ಕಾರದ್ದಲ್ಲ’ ಎಂದು ವಿಜಯನ್ ತಿರುಗೇಟು ನೀಡಿದರು


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆ. 16ರಂದು 27ನೇ ವರ್ಷದ ಶ್ರೀಕೃಷ್ಣ ಲೋಕ | ತೊಟ್ಟಿಲ ಸಂಭ್ರಮದ ಬಳಿಕ ಪುತ್ತೂರು ಪೇಟೆಯಲ್ಲಿ ನಡೆಯಲಿದೆ ಶೋಭಾಯಾತ್ರೆ

ಪುತ್ತೂರು: ಪುತ್ತೂರು ವಿವೇಕಾನಂದ ಶಿಶುಮಂದಿರ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ…