ಆನೆಗುಂದಿ ಸರಸ್ವತಿ ಪೀಠ ಪಡುಕುತ್ಯಾರು ಅಸ್ಸೆಟ್ ಅಧೀನಕ್ಕೆ ಒಳಪಟ್ಟ ಕುತ್ಯಾರು ಸೂರ್ಯ ಚೈತನ್ಯ ಪ್ರೌಢಶಾಲೆಯಲ್ಲಿ ನೂತನ ಕಂಪ್ಯೂಟರ್ ವಿಭಾಗ, ಎಲ್ ಕೆ ಜಿ ಹಾಗೂ ಯು ಕೆ ಜಿ ಕೊಠಡಿಗಳ ಉದ್ಘಾಟನೆಯನ್ನು ಪಡುಕುತ್ಯಾರು ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ವಿದ್ಯಾರ್ಥಿಗಳ ಹಸ್ತಪ್ರತಿಯ
ಚೈತನ್ಯವಾಣಿ ದ್ವಿತೀಯ ಸಂಚಿಕೆಯನ್ನು ಸ್ವಾಮೀಜಿಯವರು ಬಿಡುಗಡೆಗೊಳಿಸಿದರು. ಸಂಪಾದಕ ಮಂಡಳಿಯ ಶಿಕ್ಷಕಿ ಅನಿತಾ ಮತ್ತು ಅಮಿತಾ ಸಹಕರಿಸಿದರು.
ಅಸ್ಸೆಟ್ ಅಧ್ಯಕ್ಷರಾದ
ಬಿ ಸೂರ್ಯಕುಮಾರ ಹಳೆಯಂಗಡಿ, ಗೌರವಾಧ್ಯಕ್ಷ ಬಿ. ಮೋಹನ್ ಕುಮಾರ್ ಮಂಗಳೂರು, ಉಪಾಧ್ಯಕ್ಷರಾದ ವಿವೇಕ್ ಆಚಾರ್ಯ ಶಿರ್ವ, ಜನಾರ್ದನ ಆಚಾರ್ಯ ಬಜಕೂಡ್ಲು, ಆನೆಗುಂದಿ ಮೂಲ ಮಠದ ಅಧ್ಯಕ್ಷರಾದ ದಿನೇಶ್ ಆಚಾರ್ಯ ಪಡುಬಿದ್ರೆ,ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷೆ ವಿಜಯಲಕ್ಷ್ಮಿತಂತ್ರಿ, ಮಾತೃ ಮಂಡಳಿಯ ಅಧ್ಯಕ್ಷೆ ಶೋಭಾ ಆಚಾರ್ಯ, ಶೈಕ್ಷಣಿಕ ಸಲಹೆಗಾರ ದಿವಾಕರ ಆಚಾರ್ಯ ಗೇರುಕಟ್ಟೆ, ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.


ಅಸೆಟ್ ಕಾರ್ಯದರ್ಶಿ ಗುರುರಾಜ. ಕೆ ಸ್ವಾಗತಿಸಿ ಶಾಲಾ ಪ್ರಾಂಶುಪಾಲರಾದ ಸಂಗೀತ ರಾವ್ ವಂದಿಸಿದರು. ಶಿಕ್ಷಕಿ ಭವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.