ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ದರ್ಶನ ಬಲಿ ಬಳಿಕ ಧೂಮಾವತಿ ಹಾಗೂ ಗುಳಿಗ ದೈವಗಳ ಕೋಲ ನಡೆಯಿತು.
ಸುರೇಶ್ ನಕ್ಷತ್ರಿತ್ತಾಯರ ಉಪಸ್ಥಿತಿಯಲ್ಲಿ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯರ ನೇತೃತ್ವದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೇವರ ಉತ್ಸವ ಬಲಿ, ಪಲ್ಲಕ್ಕಿ ಉತ್ಸವ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು.
ಸಂಜೆ ಧೂಮಾವತಿ, ಗುಳಿಗ ದೈವಗಳ ಭಂಡಾರ ತೆಗೆದು ರಾತ್ರಿ ಧೂಮಾವತಿ, ಗುಳಿಗ ದೈವಗಳ ನೇಮೋತ್ಸವ ನಡೆಯಿತು.