ಪುತ್ತೂರು: ಬನ್ನೂರಿನ ಕರ್ಮಲ ಶ್ರೀ ದುರ್ಗಾಪರಮೇಶ್ವರಿ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಫೆ.22ರಂದು ರಾತ್ರಿ ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು.
ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ನೇತೃತ್ವದಲ್ಲಿ ಬೆಳಿಗ್ಗೆ ಗಣಪತಿ ಹವನ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ ಸಂಗಮ್ ಬ್ರದರ್ಸ್ ಪುತ್ತೂರು ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದು, ರಾತ್ರಿ ಶ್ರೀ ದೇವರ ಉತ್ಸವ ದರ್ಶನ ಬಲಿ, ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ ನಡೆಯಿತು.

ಭಾನುವಾರ ಸಂಜೆ ಸಂಜೆ ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂಡಳಿಯಿಂದ ಭಜನೆ, ರಾತ್ರಿ 7.30ರಿಂದ ಕೀರ್ತಿಶೇಷ ಶ್ರೀ ಚಿದಾನಂದ ಕಾಮತ್ ಕಾಸರಗೋಡು ಅವರ ಶಿಷ್ಯವರ್ಗದ ಡಿಂಡಿಮ ಕಲಾವಿದರಿಂದ ಮತ್ತು ರಾಜ್ಯ ಪಶಸ್ತಿ ವಿಜೇತ ನೆಹರುನಗರ ಮುರಳಿ ಬ್ರದರ್ಸ್ ಡ್ಯಾನ್ಸ್ ಕ್ರ್ಯೂ ಬಳಗದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಬಳಿಕ ಭಂಡಾರ ಆಗಮಿಸಿ, ಕಲ್ಲುರ್ಟಿ, ಗುಳಿಗ ದೈವಗಳ ನೇಮ ನಡೆಯಲಿದೆ.