ಪುತ್ತೂರು: ಬನ್ನೂರಿನ ಕರ್ಮಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ದೇವಿ ದರ್ಶನ ನಡೆಯಿತು.
ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ಶನಿವಾರ ಹಾಗೂ ಭಾನುವಾರ ನಡೆದಿದ್ದು, ಶನಿವಾರ ರಾತ್ರಿ ದೇವರ ದರ್ಶನ ಬಲಿ ನಡೆದು ಬಟ್ಟಲು ಕಾಣಿಕೆ ನಡೆದಿತ್ತು.
ಭಾನುವಾರ ಬೆಳಿಗ್ಗೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ ನಡೆದು, ಕ್ಷೇತ್ರದ ಧರ್ಮದರ್ಶಿ ರಾಜಣ್ಣ ಅವರಿಂದ ಶ್ರೀ ದೇವಿ ದರ್ಶನ ಮತ್ತು ಅಭಯ ನುಡಿ ಪ್ರಸಾದ ವಿತರಣೆ ಮಾಡಲಾಯಿತು.
ಮಧ್ಯಾಹ್ನ ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಅನ್ನಸಂತರ್ಪಣೆ ನಡೆಯಿತು.