Gl jewellers
ಧಾರ್ಮಿಕ

ಮಾ.2 ರಿಂದ ರಂಜಾನ್ ಉಪವಾಸ ಆರಂಭ

ಪವಿತ್ರ ರಂಝಾನ್ ಮಾಸದ ಚಂದ್ರ ದರ್ಶನವು ಶುಕ್ರವಾರ ಗೋಚರಿಸದೆ ಇರುವುದರಿಂದ ಮಾ.2ರಿಂದ ರಾಜ್ಯಾದ್ಯಂತ ಉಪವಾಸ ವ್ರತ ಆಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ ಸಂಚಾಲಕ ಮೌಲಾನಾ ಮನ್ಸೂದ್ ಇಮ್ರಾನ್ ರಶಾದಿ ತಿಳಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವು ಶುಕ್ರವಾರ ಗೋಚರಿಸದೆ ಇರುವುದರಿಂದ ಮಾ.2ರಿಂದ ರಾಜ್ಯಾದ್ಯಂತ ಉಪವಾಸ ವ್ರತ ಆಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ ಸಂಚಾಲಕ ಮೌಲಾನಾ ಮನ್ಸೂದ್ ಇಮ್ರಾನ್ ರಶಾದಿ ತಿಳಿಸಿದರು.

Papemajalu garady
Karnapady garady

ಶುಕ್ರವಾರ ಸಂಜೆ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಸ್‌ ಬೋರ್ಡ್‌ ಕೇಂದ್ರ ಕಚೇರಿ(ದಾರುಲ್‌ ಔಕಾಫ್‌)ಯಲ್ಲಿ ಅಮೀರೆ ಶರೀಅತ್ ಮೌಲಾನಾ ಸಗೀ‌ರ್ ಅಹ್ಮದ್ ಖಾನ್ ರಶಾದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಹಾಗೂ ದೇಶದ ವಿವಿಧ ರಾಜ್ಯಗಳಲ್ಲಿ ಚಂದ್ರ ದರ್ಶನದ ಬಗ್ಗೆ ಲಭ್ಯವಾದ ಮಾಹಿತಿ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಆಂಧ್ರಪ್ರದೇಶ, ಬಿಹಾರ, ಉತ್ತರಪ್ರದೇಶ, ತಮಿಳುನಾಡು, ಉತ್ತರಾಖಂಡ, ದಿಲ್ಲಿ ಸೇರಿದಂತೆ ವಿವಿಧ ರಾಜ್ಯಗಳು ಹಾಗೂ ನಮ್ಮ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಮಾಹಿತಿಗಳನ್ನು ತರಿಸಿಕೊಳ್ಳಲಾಗಿತ್ತು. ಎಲ್ಲಿಯೂ ಚಂದ್ರದರ್ಶನವಾದ ಮಾಹಿತಿ ಇಲ್ಲ. ಆದುದರಿಂದ, ಶನಿವಾರದಿಂದ ತರಾವೀಹ್ ನಮಾಝ್ ಹಾಗೂ ರವಿವಾರ ಮೊದಲ ಉಪವಾಸ ಆಚರಿಸಲಾಗುವುದು ಎಂದು ಮನ್ಸೂದ್ ಇಮ್ರಾನ್ ತಿಳಿಸಿದರು


ಈ ಸುದ್ದಿಯನ್ನು ಶೇರ್ ಮಾಡಿ

Related Posts