Friday, November 22
Share News

ಮಕ್ಕಳು ಮತ್ತು ಮಹಿಳೆಯರಿಗಾಗಿ ನೂತನ ಆರೋಗ್ಯ ಸೇವಾ ಯೋಜನೆಯನ್ನು ಪ್ರಾರಂಭಿಸುವುದಾಗಿ ರಿಲಯನ್ಸ್ ಫೌಂಡೇಶನ್‌ನ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಎಂ. ಅಂಬಾನಿ ಅವರು ಘೋಷಿಸಿದ್ದಾರೆ.

ಈ ಯೋಜನೆಯಲ್ಲಿ ಮಕ್ಕಳು, ಹದಿಹರೆಯದ ಹುಡುಗಿಯರು, ಮಹಿಳೆಯರಿಗೆ ಅಗತ್ಯ ತಪಾಸಣೆ ಮತ್ತು ಚಿಕಿತ್ಸೆಗಳಿಗೆ ಆದ್ಯತೆ ನೀಡಲಾಗುತ್ತದೆ. ಆರೋಗ್ಯ ಸೇವಾ ಯೋಜನೆಯ ಭಾಗವಾಗಿ 50,000 ಮಕ್ಕಳಲ್ಲಿ ಜನ್ಮಜಾತ ಹೃದಯ ಕಾಯಿಲೆಗೆ ಉಚಿತ ತಪಾಸಣೆ ಮತ್ತು ಚಿಕಿತ್ಸೆ, 50,000 ಮಹಿಳೆಯರ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್‌ನ ಉಚಿತ ತಪಾಸಣೆ ಮತ್ತು ಚಿಕಿತ್ಸೆ ನೀಡುವ ಉದ್ದೇಶ ಇದೆ ಎಂದು ಹೇಳಿದ್ದಾರೆ.

ಸಿರ್ ಹೆಚ್ ಆಸ್ಪತ್ರೆಯ 10 ನೇ ವಾರ್ಷಿಕೋತ್ಸವದ ನೆನಪಿಗಾಗಿ 10,000 ಹದಿಹರೆಯದ ಹುಡುಗಿಯರಿಗೆ ಉಚಿತ ಗರ್ಭಕಂಠದ ಕ್ಯಾನ್ಸ‌ರ್ ಲಸಿಕೆಯನ್ನು ನೀಡುವುದಾಗಿ ನೀತಾ ಅಂಬಾನಿ ವಾಗ್ದಾನ ಮಾಡಿದ್ದಾರೆ.


Share News

Comments are closed.

Exit mobile version