ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಕೃಷಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಗಳನ್ನು ಜಾರಿಗೊಳಿಸಿದರು ಅದಕ್ಕೆ ದಾಖಲೆ ಮುಖ್ಯವಾಗಿದೆ. ಆಧಾರ್ ಕಾರ್ಡ್ ಜೊತೆ ಕೃಷಿಗೆ ಸಂಬಂಧಿಸಿದ ಪಹಣಿ ಕೂಡ ಮುಖ್ಯ. ಈ ಕಾರಣಕ್ಕಾಗಿ ಜಮೀನಿನ ದಾಖಲೆಗಳು ಸುರಕ್ಷಿತವಾಗಿರಿಸಲು ಪಹಣಿ ಜೊತೆ ಆಧಾರ್ ಲಿಂಕ್ ಕಡ್ಡಾಯಗೊಳಿಸಿದೆ. ಹಾಗಾದರೆ ಪಹಣಿಗೆ ಆಧಾರ್ ಲಿಂಕ್ ಮಾಡುವುದು ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಪಹಣಿಗೆ ಆಧಾರ್ ಲಿಂಕ್ ಮಾಡುವುದು ಹೇಗೆ?:
ನಿಮ್ಮ ಜಮೀನಿನ ಪಹಣಿ (rtc) ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಈಗ ತುಂಬಾ ಸುಲಭ! ನೀವು ಈ ಕೆಲಸವನ್ನು ಮನೆಯಿಂದಲೇ ಮಾಡಬಹುದು.
ಕಂದಾಯ ಇಲಾಖೆಯಿಂದ ಪಹಣಿಗೆ ಆಧಾರ್ ಕಾರ್ಡ ಅನ್ನು ಜೋಡಣೆ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್ https://landrecords.karnataka.gov.in/ ಅನ್ನು ಬಿಡುಗಡೆ ಮಾಡಲಾಗಿದೆ.
ಜಮೀನು ಹೊಂದಿರುವ ಸಾರ್ವಜನಿಕರು ಕಂದಾಯ ಇಲಾಖೆಯಿ ಈ ಅಧಿಕೃತ ವೆಬ್ಸೈಟ್ ಅನ್ನು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು ಭೇಟಿ ಮಾಡಿ ಮನೆಯಲ್ಲೇ ಕುಳಿತುಕೊಂಡು ನಿಮ್ಮ ಜಮೀನಿನ ಪಹಣಿಗೆ (RTC) ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಬಹುದು.
- ಮೊದಲಿಗೆ https://landrecords.karnataka.gov.in/ ವೆಬ್ ಸೈಟ್ ಗೆ ಭೇಟಿ ನೀಡಿ
- ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು captcha code ನ್ನು ಭರ್ತಿ ಮಾಡಿ
- send otp ಮೇಲೆ ಕ್ಲಿಕ್ ಮಾಡಿ otp ಯನ್ನು ನಮೂದಿಸಿ.
- ತದನಂತರ ಇಲ್ಲಿ ಜಮೀನು ಯಾರ ಹೆಸರಿಗೆ ಇದಿಯೋ ಅವರ ಆಧಾರ್ ಸಂಖ್ಯೆಯನ್ನು ಮತ್ತು ಅಧಾರ್ ನಲ್ಲಿರುವಂತೆಯೇ ಹೆಸರನ್ನು ಹಾಕಿ ಹಾಕಿ.
- ನಾನು ಇಲ್ಲಿ ಸ್ವಯಂ ಪ್ರೇರಣೆಯಿಂದ ಆಧಾರ್ ಗಾಗಿ ನನ್ನ ಒಪ್ಪಿಗೆಯನ್ನು ನೀಡುತ್ತೇನೆ ಎಂಬ ಚೌಕದ ಮೇಲೆ ಕ್ಲಿಕ್ ಮಾಡಿ verify ಮೇಲೆ ಕ್ಲಿಕ್ ಮಾಡಿ.
- ಆಧಾರವನ್ನು ಯಶಸ್ವಿಯಾಗಿ ಪರಿಶೀಲಿಸಲಾಗಿದೆ ಎಂಬ ಸಂದೇಶ ಕಾಣಿಸುತ್ತದೆ. fetch details ಮೇಲೆ ಕ್ಲಿಕ್ ಮಾಡಿ.
ಇಷ್ಟು ಮಾಡಿದರೆ ನಿಮ್ಮ ಪಹಣಿಗೆ ಆಧಾರ್ ಲಿಂಕ್ ಆಗಿದೆ ಎಂದು ಖಚಿತ. ಈ ಪ್ರಕ್ರಿಯೆ ಉಚಿತ, ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ.