Friday, November 22
Share News

ಬೆಂಗಳೂರು : ರಾಜ್ಯಾದ್ಯಂತ ಮೇ 29ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತ ವಾರ್ಷಿಕ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ 2024-25ನೆ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನು ಶಾಲಾ ಶಿಕ್ಷಣ ಇಲಾಖೆಯು ತನ್ನ ವೆಬ್‍ಸೈಟ್‍ನಲ್ಲಿ ಪ್ರಕಟಿಸಿದೆ.

ಈ ನಡುವೆ ಕೇಂದ್ರವು ಶಾಲೆಗೆ ಸೇರಲು 6 ವರ್ಷ ಕಡ್ಡಾಯವಾಗಿರಬೇಕು ಎಂದು ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಇದರ ನಡುವೆಯೂ ಪ್ರಸಕ್ತ ವರ್ಷದ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ಜೂ.1ಕ್ಕೆ ಆರು ವರ್ಷಗಳು ತುಂಬಿರಬೇಕು ಎಂಬ ನಿಯಮವನ್ನು ಸಡಿಲಿಸಿದ್ದು, ತಿದ್ದುಪಡಿಯನ್ನೇ ಮಾರ್ಗಸೂಚಿಯಲ್ಲಿ ಪ್ರಕಟಿಸಲಾಗಿದೆ.

ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ಉಲ್ಲೇಖ 01 ರನ್ವಯ ಆರ್.ಟಿ.ಇ ಕಾಯಿದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012 ರಂತೆ ಶೈಕ್ಷಣಿಕ ವರ್ಷದ ಜೂನ್ 01 ನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶಿಸಲಾಗಿದೆ.

ಉಲ್ಲೇಖ 02 ರನ್ವಯ ಶೈಕ್ಷಣಿಕ ವರ್ಷದ ಜೂನ್ 01ನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶಿಸಿದ ಎಂಬುದನ್ನು 2025-26 ನೇ ಸಾಲಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ 01ನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿದೆ ಎಂದು ತಿದ್ದಿ ಓದಿಕೊಳ್ಳತಕ್ಕದ್ದು. ಉಳಿದಂತೆ ಇಪಿ 260 ಪಿಜಿಸಿ 2021, ಬೆಂಗಳೂರು ದಿನಾಂಕ: 26.07.2022. ರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಆದೇಶಿಸಿದೆ.ಹಿನ್ನೆಲೆಯಲ್ಲಿ 2023-24ನೇ ಸಾಲಿನಿಂದ ಎಲ್.ಕೆ.ಜಿ ತರಗತಿಗೆ ದಾಖಲಾತಿ ಹೊಂದಲು ಜೂನ್ 01ನೇ ತಾರೀಖಿಗೆ ಅನ್ವಯವಾಗುವಂತೆ 04 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿರುತ್ತದೆ.


Share News

Comments are closed.

Exit mobile version