ಪುತ್ತೂರು: ಹಿರಿಯರು ಒಂದೆಡೆ ಸೇರಿದಾಗ ಪ್ರಾಪಂಚಿಕ ವಿಚಾರಗಳ ಬಗ್ಗೆ ಮಾತ್ರ ಚರ್ಚಿಸದೆ ಭಗವಂತನ ನಾಮಸ್ಮರಣೆ ಮಾಡಬೇಕು. ಜೊತೆಗೆ ಆಧ್ಯಾತ್ಮಿಕ ಚಿಂತನೆಗಾಗಿ ಉತ್ತಮ ಪುಸ್ತಕಗಳನ್ನು ಓದುವುದರಿಂದ ಹಿರಿಯರು ಮಾನಸಿಕವಾಗಿ ಸದೃಢವಾಗಲು ಸಾಧ್ಯವೆಂದು ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ತಿಳಿಸಿದರು.
ಪೊಳಲಿಯ ಶ್ರೀ ರಾಮಕೃಷ್ಣ ತಪೋವನದ ಸಭಾಭವನದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿಯ ಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯಾರು ನಾರಾಯಣ ಭಟ್ ಪ್ರತಿಷ್ಠಾನದ ಯೋಜನೆಗಳನ್ನು ಕಾರ್ಯಗತಗೊಳಿಸುವುದರೊಂದಿಗೆ ವಿವಿದೋದ್ದೇಶ ಸಹಕಾರಿ ಸಂಘ ಆರಂಭಿಸಲು ಸದಸ್ಯರ ಸಹಕಾರ ಅಗತ್ಯವೆಂದು ತಿಳಿಸಿದರು.
ಪಿ.ವೆಂಕಟೇಶ ನಾವುಡ, ಯಶವಂತ ಪೊಳಲಿ,
ಪ್ರತಿಷ್ಠಾನದ ಉಪಾಧ್ಯಕ್ಷ ಎಂ. ಜಯರಾಮ ಭಂಡಾರಿ ಧರ್ಮಸ್ಥಳ, ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸೀತಾರಾಮ ಶೆಟ್ಟಿ ಉಜಿರೆ, ಗಣೇಶ್ ಭಟ್ ಕುತ್ರೊಟ್ಟು, ಸೀತಾರಾಮ ಶೆಟ್ಟಿ, ಅನಾರು ಕೃಷ್ಣಶರ್ಮ, ರಾಜಮಣಿ ರಾಮಕುಂಜ, ಕೆ .ಉದಯ ಶಂಕರ್ ರೈ ಪುಣಚ, ಕಸ್ತೂರಿ ಲೋಕೇಶ ಹೆಗ್ದೆ, ಚಂದ್ರಶೇಖರ ಆಳ್ವ ಪಡುಮಲೆ, ಕೆ.ರಾಮಕೃಷ್ಣ ನಾಯಕ್ ಉಪಸ್ಥಿತರಿದ್ದರು.
ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಸಂಬಂಧಿಸಿದ ಗ್ರಾಮದ ದೈವಗಳ ಗುರಿಕಾರರಾಗಿ ವಾರ್ಷಿಕ ನೇಮೋತ್ಸವದಲ್ಲಿ ಬಾಮಾ ಪ್ರಸಾದವನ್ನು ಸ್ವೀಕರಿಸಿದ ಪ್ರತಿಷ್ಠಾನದ ಸಹ ಸಂಚಾಲಕ ಭಾಸ್ಕರ ಬಾರ್ಯರನ್ನು ಅಭಿನಂದಿಸಲಾಯಿತು.
ಭಾಸ್ಕರ ಬಾರ್ಯ ಸ್ವಾಗತಿಸಿ, ಉಪಾಧ್ಯಕ್ಷರಾದ ಲೋಕೇಶ್ ಹೆಗ್ಡೆ ಪುತ್ತೂರು ವಂದಿಸಿದರು. ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.