Share News

ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿನಲ್ಲಿ (Shiradi ghat) ಪದೇ ಪದೆ ಭೂ‌ಕುಸಿತ ಹಿನ್ನೆಲೆ ಗುಡ್ಡ ಕುಸಿತ ಪ್ರದೇಶಕ್ಕೆ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಶಿರಾಡಿ ಘಾಟಿಯ ಹಲವೆಡೆ ಗುಡ್ಡ ಕುಸಿತ‌ ಪ್ರದೇಶಗಳನ್ನು ಪರಿಶೀಲಿಸಿರುವ ಸಿಎಂ, ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾತನಾಡಿ ಅವರು, ರಾಷ್ಟ್ರೀಯ ಹೆದ್ದಾರಿ 75ರ ಮೇಲ್ಭಾಗದಲ್ಲಿ ಮಣ್ಣು ಸಡಿಲವಾಗಿದೆ. ಹೀಗಾಗಿ ಪದೇಪದೇ ಕುಸಿಯುತ್ತಿದೆ ಎಂದು ಹೇಳಿದ್ದಾರೆ.

ಶಿರಾಡಿಘಾಟ್ನ ದೊಡ್ಡತಪ್ಲುನಲ್ಲಿ ಮಾತನಾಡಿದ ಅವರು, ಸ್ಥಳೀಯರ ಅಭಿಪ್ರಾಯವನ್ನು ಕೇಂದ್ರ ಸಚಿವರಿಗೆ ತಿಳಿಸುತ್ತೇನೆ. ಸಕಲೇಶಪುರ ಭಾಗದಲ್ಲಿ ವಾಡಿಕೆಗಿಂತ ಶೇ.65ರಷ್ಟು ಹೆಚ್ಚು ಮಳೆ ಆಗಿದೆ. ಶಿರಾಡಿಘಾಟ್ನಲ್ಲಿ ಹೆದ್ದಾರಿ ಸರಿಪಡಿಸುವಂತೆ ಪತ್ರ ಬರೆಯುವೆ. ದೆಹಲಿಗೆ ಹೋದಾಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ ಮನವರಿಕೆ ಮಾಡುವೆ ಎಂದು ಹೇಳಿದ್ದಾರೆ.

ಶಿರಾಡಿಘಾಟ್ನಲ್ಲಿ ಮಣ್ಣು ಕುಸಿತದಿಂದ ವಾಹನ ಸಂಚಾರಕ್ಕೆ ಅಡ್ಡಿ ಆಗಿದೆ. 1 ಎಸ್ಡಿಆರ್ಎಫ್ ಟೀಮ್ ಇಲ್ಲೇ ನಿಯೋಜನೆ ಮಾಡಿದ್ದೇವೆ. ಬೇಕಿದ್ದರೆ ಹೆಚ್ಚಿನ ಭದ್ರತೆ ವಹಿಸುತ್ತೇವೆ. ಯಾಕೆ ಭೂ ಕುಸಿತ ಆಗುತ್ತಿದೆ ಎಂಬುದದರ ಬಗ್ಗೆ ಅಭಿಪ್ರಾಯ ಪಡೆದು ಕ್ರಮ ವಹಿಸುತ್ತೇವೆ ಎಂದಿದ್ದಾರೆ.

ಶಿರಾಡಿಘಾಟ್ ರಸ್ತೆಯ ದೊಡ್ಡತಪ್ಪಲು ಬಳಿ ಗುಡ್ಡ ಕುಸಿಯುತ್ತಲೇ ಇದೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಂಟೇನರ್ ಹಾಗೂ ಹಲವು ವಾಹನಗಳ ಮೇಲೆ ಗುಡ್ಡ ಕುಸಿದಿತ್ತು. ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ. ಕಾರ್ಯಾಚರಣೆ ಮಾಡಿ, ಮಣ್ಣು ತೆರವು ಮಾಡಿದ್ದರು ಮತ್ತೆ ಗುಡ್ಡ ಕುಸಿಯುತ್ತಿದೆ.

ಕೇರಳದಲ್ಲಿ ನೂರು ಮನೆ ನಿರ್ಮಿಸಿ ಕೊಡುತ್ತೇವೆ. ಕೇರಳದ ಮುಖ್ಯಮಂತ್ರಿ ಜೊತೆ ಮಾತನಾಡಿದ್ದೇನೆ. ಮನೆಗಳು ಕೊಚ್ಚಿ ಹೋಗಿವೆ, ಜೀವಗಳು ಹಾನಿಯಾಗಿವೆ. ಅವರಿಗೆ ಸಹಾಯ ಮಾಡಲು ಮನೆ ನಿರ್ಮಿಸಿ ಕೊಡುತ್ತೇವೆ. ಹತ್ತು ಕೋಟಿ ರೂ. ವೆಚ್ಚದಲ್ಲಿ ಮನೆ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದರು.


Share News

Comments are closed.

Exit mobile version