pashupathi
ವಿಶೇಷ

ವಿಮಾನ ನಿಲ್ದಾಣಕ್ಕೆ  ಆಸ್ಟ್ರಿಯಾದಿಂದ ಬಂದಿಳಿದ 2 ಅಗ್ನಿಶಾಮಕ ವಾಹನ!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ವಿಜಯಪುರ: ಉದ್ಘಾಟನೆಗೆ ಸಜ್ಜಾಗಿರುವ  ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ದೂರದ ಆಸ್ಟ್ರಿಯಾದಿಂದ ಸೋಮವಾರ ಬಂದು ತಲುಪಿವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

akshaya college

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಈ ಅಗ್ನಿಶಾಮಕ ವಾಹನಗಳು ಕಂಪ್ಯೂಟರೀಕೃತವಾಗಿದ್ದು, ಜಾಗತಿಕ ಟೆಂಡ‌ರ್ ಅಡಿಯಲ್ಲಿ ಆಸ್ಟ್ರಿಯಾದಿಂದ ಪೂರೈಕೆಯಾಗಿವೆ. ಇವುಗಳ ಬೆಲೆ ಅಂದಾಜು 24 ಕೋಟಿ ರೂಪಾಯಿ. ಇವು ತುರ್ತು ಸಂದರ್ಭಗಳಲ್ಲಿ 160 ಮೀಟರಿನವರೆಗೂ ನೀರನ್ನು ಹಾಯಿಸಿ, ಬೆಂಕಿಯನ್ನು ನಂದಿಸುವ ಸಾಮರ್ಥ್ಯ ಹೊಂದಿವೆ. ಈ ಮೂಲಕ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಹೇಳಿದ್ದ ಮತ್ತೊಂದು ಅಗತ್ಯ ಪೂರೈಸಲಾಗಿದೆ ಎಂದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts