tamanvi
ವಿಶೇಷಸ್ಥಳೀಯ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಮೂಲನಾಗನ ಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ಬೊಳುವಾರು ಕಾರ್ಯಕ್ಷೇತ್ರದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೂಲನಾಗನ ಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ಯೋಜನೆಯ ಬೊಳುವಾರು ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ, ಮೇಲ್ವಿಚಾರಕಿ ಲತಾ, ಸೇವಾ ಪ್ರತಿನಿಧಿ ಕಾವ್ಯಾ ಹಾಗೂ ಸಂಘದ ಸದಸ್ಯರು ಭಾಗವಹಿಸಿ ನಾಗನ ಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು.

ಧಾರ್ಮಿಕ ಕ್ಷೇತ್ರಗಳ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 135