ವಿಶೇಷ

ಪುತ್ತೂರು:(ಆ. 30) ವಿದ್ಯಾಮಾತಾ ಅಕಾಡೆಮಿಯಲ್ಲಿ ‘ಕೃಷ್ಣ ವೇಷ’ ಹಾಗೂ ‘ಯಶೋಧ ಕೃಷ್ಣ’ ಸ್ಪರ್ಧೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ವಿದ್ಯಾಮಾತಾ ಅಕಾಡೆಮಿ ಹಾಗೂ ನಂದಗೋಕುಲ ಚಿಣ್ಣರ ಅಂಗಳ, ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ‘ಕೃಷ್ಣ ವೇಷ’ ಹಾಗೂ ‘ಯಶೋಧ ಕೃಷ್ಣ’ ಸ್ಪರ್ಧೆ ಆಗಸ್ಟ್ 30ರಂದು ನಡೆಯಲಿದೆ.

gl

ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ವಿದ್ಯಾಮಾತಾ ಅಕಾಡೆಮಿ ಆವರಣದಲ್ಲಿ ಭಾನುವಾರ ಬೆಳಿಗ್ಗೆ 10 ಗಂಟೆಗೆ ಸ್ಪರ್ಧೆ ನಡೆಯಲಿದೆ.

ಸ್ಪರ್ಧೆಯು ಮೂರು ವಿಭಾಗಗಳಲ್ಲಿ ನಡೆಯಲಿದ್ದು, 1ರಿಂದ 3 ವರ್ಷದೊಳಗಿನ ಮಕ್ಕಳಿಗೆ ಕೃಷ್ಣ ವೇಷ, 3ರಿಂದ 6 ವರ್ಷದೊಳಗಿನ ಮಕ್ಕಳಿಗೆ ಕೃಷ್ಣ ವೇಷ ಹಾಗೂ 1ರಿಂದ 6 ವರ್ಷದೊಳಗಿನ ಮಕ್ಕಳ ಅಮ್ಮಂದಿರಿಗೆ ಯಶೋಧ ಕೃಷ್ಣ ಸ್ಪರ್ಧೆ ಆಯೋಜಿಸಲಾಗಿದೆ.

ಪ್ರತಿ ವಿಭಾಗದಲ್ಲೂ ಪ್ರಥಮ ಬಹುಮಾನವಾಗಿ ₹3,000, ದ್ವಿತೀಯ ₹2,000 ಹಾಗೂ ತೃತೀಯ ₹1,000 ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಮುದ್ದು ಮಕ್ಕಳಿಗೆ ಹಾಗೂ ಯಶೋಧ ಕೃಷ್ಣರಿಗೆ ಪ್ರಮಾಣ ಪತ್ರ ಮತ್ತು ಪದಕವನ್ನು ನೆನಪಿನ ಕಾಣಿಕೆಯಾಗಿ ನೀಡಲಾಗುತ್ತದೆ.

ಸ್ಪರ್ಧಾರ್ಥಿಗಳು ಆಗಮಿಸುವಾಗ ಮಗುವಿನ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಹಾಗೂ ಒಂದು ಭಾವಚಿತ್ರವನ್ನು ಕಡ್ಡಾಯವಾಗಿ ತರಬೇಕು. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಆಗಸ್ಟ್ 28ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ 8590773486 ಸಂಖ್ಯೆಯನ್ನು ಸಂಪರ್ಕಿಸಬಹುದು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನ ಯುವ ಮಹಿಳಾ ನಾಯಕಿ ವಿದ್ಯಾ ಆರ್. ಗೌರಿಗೆ ಪ್ರತಿಷ್ಠಿತ ಫಾರ್ ಈಸ್ಟ್ ಏಷ್ಯಾ ಲೀಡರ್‌ಶಿಪ್ ಅವಾರ್ಡ್

ಪುತ್ತೂರು: ಪುತ್ತೂರಿನ ಪ್ರಭಾವಿ ಯುವ ಮಹಿಳಾ ನಾಯಕಿ, ನಗರಸಭೆಯ ಮಾಜಿ ಉಪಾಧ್ಯಕ್ಷೆ ವಿದ್ಯಾ ಆರ್.…

ಪಶುಪತಿ ಲೈಟ್ಸ್‌ನಲ್ಲಿ ‘ಗಾಳಿ–ಬೆಳಕು 2026’ ಸಾಲು ಸಾಲು ಹಬ್ಬಗಳ ಸಂಭ್ರಮಕ್ಕೆ ಮುಂಗಡ ಬುಕ್ಕಿಂಗ್‌ಗೂ ಭರ್ಜರಿ ಆಫರ್!

ಪುತ್ತೂರು: ಪುತ್ತೂರಿನ ಜಿಎಲ್ ಟ್ರೇಡ್ ಸೆಂಟರ್‌ನಲ್ಲಿರುವ ಪಶುಪತಿ ಲೈಟ್ಸ್, ಫ್ಯಾನ್ಸ್,…