ವಿಶೇಷ

ತುಳುವಿಗೆ ನೀಡಿದ ಭರವಸೆ ಈಡೇರಲಿ: ತುಳು ಮಹಾಸಭೆ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತುಳು ಭಾಷೆಗೆ ಎರಡನೇ ಭಾಷೆಯ ಸ್ಥಾನಮಾನ ನೀಡುವುದರ ಜೊತೆಗೆ ತುಳು ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ನೀಡಿದ್ದ ಭರವಸೆಯನ್ನು ಶೀಘ್ರವಾಗಿ ಈಡೇರಿಸಬೇಕು ಎಂದು ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಆಗ್ರಹಿಸಿದೆ.

ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಗ್ಯಾರಂಟಿಗಳನ್ನು ಜಾರಿಗೊಳಿಸಿರುವಂತೆ, ತುಳು ಭಾಷೆಯ ಅಭಿವೃದ್ಧಿಗೆ ಸಂಬಂಧಿಸಿದ ಮಹತ್ವದ ಆಶ್ವಾಸನೆಗಳನ್ನೂ ಸರ್ಕಾರ ಆದ್ಯತೆಯೊಂದಿಗೆ ಈಡೇರಿಸಬೇಕು ಎಂದು ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ಕರ್ನಾಟಕ ರಾಜ್ಯ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ ಒತ್ತಾಯಿಸಿದ್ದಾರೆ.

ತುಳುವ ಕರ್ನಾಟಕದ ಜನರ ಬಹುದಿನಗಳ ಬೇಡಿಕೆಯಾಗಿದ್ದು, ಭಾಷೆಯ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಸರ್ಕಾರ ಸ್ಪಷ್ಟವಾದ ಹೆಜ್ಜೆ ಇಡಬೇಕಾಗಿದೆ. ಮಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ನಡೆಯಲಿರುವ ಸಚಿವ ಸಂಪುಟ ಅಧಿವೇಶನದಲ್ಲಿಯೇ ತುಳು ಭಾಷೆಗೆ ಎರಡನೇ ಭಾಷೆಯ ಸ್ಥಾನಮಾನ ನೀಡುವ ಕುರಿತು ಹಾಗೂ ತುಳು ಅಭಿವೃದ್ಧಿ ಪ್ರಾಧಿಕಾರ ರಚಿಸುವ ಬಗ್ಗೆ ಸರ್ಕಾರ ಘೋಷಣೆ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ರಾಜ್ಯ ಕಾರ್ಯದರ್ಶಿ ಮಾಳ ಹರ್ಷೇಂದ್ರ ಜೈನ್, ರಾಜ್ಯ ಸಂಚಾಲಕ ಅಭಿಷೇಕ್ ಕೆ. ಕಾರ್ಕಳ, ಬೆಂಗಳೂರು ವಲಯದ ಅಧ್ಯಕ್ಷ ಪುರುಷೋತ್ತಮ ಚೇಂಡ್ಲ, ಪ್ರಧಾನ ಸಂಚಾಲಕ ಶಾಂತಾರಾಮ್ ವಿ. ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಶಿವಾನಂದ ಸಾಲ್ಯಾನ್ ಉಪಸ್ಥಿತರಿದ್ದರು.

ತುಳುವರಿಗೆ ಸರ್ಕಾರ ನೀಡಿರುವ ಭರವಸೆಗಳನ್ನು ವಿಳಂಬ ಮಾಡದೆ ಶೀಘ್ರವಾಗಿ ಈಡೇರಿಸಬೇಕು. ತುಳು ಭಾಷೆಯ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಈ ವೇಳೆ ಮುಖಂಡರು ಸರ್ಕಾರವನ್ನು ಒತ್ತಾಯಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಕಡಬ ಪಟ್ಟಣ ಪಂಚಾಯಿತಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ; ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ

ಕಡಬ : ಕರ್ನಾಟಕ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ಕಡಬ ಪಟ್ಟಣ ಪಂಚಾಯಿತಿಗೆ…

ಪುತ್ತೂರಿನ ಯುವ ಮಹಿಳಾ ನಾಯಕಿ ವಿದ್ಯಾ ಆರ್. ಗೌರಿಗೆ ಪ್ರತಿಷ್ಠಿತ ಫಾರ್ ಈಸ್ಟ್ ಏಷ್ಯಾ ಲೀಡರ್‌ಶಿಪ್ ಅವಾರ್ಡ್

ಪುತ್ತೂರು: ಪುತ್ತೂರಿನ ಪ್ರಭಾವಿ ಯುವ ಮಹಿಳಾ ನಾಯಕಿ, ನಗರಸಭೆಯ ಮಾಜಿ ಉಪಾಧ್ಯಕ್ಷೆ ವಿದ್ಯಾ ಆರ್.…

ಪಶುಪತಿ ಲೈಟ್ಸ್‌ನಲ್ಲಿ ‘ಗಾಳಿ–ಬೆಳಕು 2026’ ಸಾಲು ಸಾಲು ಹಬ್ಬಗಳ ಸಂಭ್ರಮಕ್ಕೆ ಮುಂಗಡ ಬುಕ್ಕಿಂಗ್‌ಗೂ ಭರ್ಜರಿ ಆಫರ್!

ಪುತ್ತೂರು: ಪುತ್ತೂರಿನ ಜಿಎಲ್ ಟ್ರೇಡ್ ಸೆಂಟರ್‌ನಲ್ಲಿರುವ ಪಶುಪತಿ ಲೈಟ್ಸ್, ಫ್ಯಾನ್ಸ್,…