tamanvi
ವಿಶೇಷ

LPG ರೀ-ಬುಕ್ಕಿಂಗ್ ಅವಧಿ 45ರಿಂದ 25 ದಿನಕ್ಕೆ ಇಳಿಕೆ: ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಮಾಹಿತಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಎಲ್‌ಪಿಜಿ ಸಿಲಿಂಡರ್ ಮರುಬುಕ್ಕಿಂಗ್‌ಗೆ ಇದ್ದ 45 ದಿನಗಳ ಕಾಯುವಿಕೆ ಅವಧಿಯನ್ನು ಇದೀಗ 25 ದಿನಗಳಿಗೆ ಇಳಿಸಲಾಗಿದೆ.

ಹೊಸ ನಿಯಮವನ್ನು ತಕ್ಷಣದಿಂದಲೇ ಜಾರಿಗೆ ತರಲು ತೈಲ ಮಾರುಕಟ್ಟೆ ಸಂಸ್ಥೆಗಳಿಗೆ (OMCs) ಸೂಚನೆ ನೀಡಲಾಗಿದೆ. ಇದರೊಂದಿಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಗೃಹಬಳಕೆಯ ಎಲ್‌ಪಿಜಿ ಗ್ರಾಹಕರಿಗೆ ಒಂದೇ ರೀತಿಯ 25 ದಿನಗಳ ಮರುಬುಕ್ಕಿಂಗ್ ನಿಯಮ ಅನ್ವಯವಾಗಲಿದೆ ಎಂದು ಕೇಂದ್ರ ಸಚಿವ ಸುರೇಶ್ ಗೋಪಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts