tamanvi
ವಿಶೇಷ

ಮೊಗ್ರು: ಶ್ರೀ ರಾಮ ಶಿಶು ಮಂದಿರದ 5ನೇ ವರ್ಷದ ಶ್ರೀ ಕೃಷ್ಣೋತ್ಸವ ಸಂಭ್ರಮ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ತಾಲೂಕಿನ ಮೊಗ್ರು ಗ್ರಾಮದ ಜೈ ಶ್ರೀರಾಮ ಸೇವಾ ಟ್ರಸ್ಟ್ (ರಿ.) ಅಲೆಕ್ಕಿ–ಮುಗೇರಡ್ಕ ಇದರ ಶ್ರೀ ರಾಮ ಶಿಶು ಮಂದಿರದಲ್ಲಿ 5ನೇ ವರ್ಷದ ಶ್ರೀ ಕೃಷ್ಣೋತ್ಸವ ಹಾಗೂ ವಿವಿಧ ಕಾರ್ಯಕ್ರಮಗಳು ಸೆ.6ರಂದು ಸಂಭ್ರಮದಿಂದ ನೆರವೇರಿತು.

ಮಕ್ಕಳ ಧಾರ್ಮಿಕ ಹಾಗೂ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ, ನವಶಕ್ತಿ ಗುರುವಾಯನಕೆರೆ ನಿವಾಸಿ ಕಾಶಿ ಶೆಟ್ಟಿ ಅವರ ಸ್ಮರಣಾರ್ಥ ನಿರ್ಮಿಸಲಾಗಿರುವ ‘ಕಾಶಿ ಶೆಟ್ಟಿ ವಿದ್ಯಾ ಮಂದಿರ’ ಹಾಗೂ ಶಾಸಕ ಹರೀಶ್ ಪೂಂಜಾ ಅವರ ನೆರವಿನಿಂದ ಮಕ್ಕಳ ಅನ್ನಯಜ್ಞಕ್ಕಾಗಿ ನಿರ್ಮಿಸಲಾದ ಅಡುಗೆ ಕೋಣೆ ಕಟ್ಟಡದ ಉದ್ಘಾಟನೆಯೂ ಇದೇ ಸಂದರ್ಭದಲ್ಲಿ ನಡೆಯಿತು.

ಶಶಿಧರ ಶೆಟ್ಟಿ, ನವಶಕ್ತಿ ಗುರುವಾಯನಕೆರೆ ಅವರು ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಸುಮಾರು ರೂ.7 ಲಕ್ಷ ವೆಚ್ಚದಲ್ಲಿ ಅಡುಗೆ ಕೋಣೆ ನಿರ್ಮಾಣಗೊಂಡಿದ್ದು, ಶ್ರೀ ರಾಮ ಶಿಶು ಮಂದಿರದಲ್ಲಿ ನೀಡಲಾಗುತ್ತಿರುವ ಧಾರ್ಮಿಕ ಶಿಕ್ಷಣ ಹಾಗೂ ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಮ್ಮ ತಾಯಿ ಕಾಶಿ ಶೆಟ್ಟಿ ಅವರ ಸ್ಮರಣಾರ್ಥ ಈ ಕಟ್ಟಡಕ್ಕೆ ನೆರವು ನೀಡಿದ್ದು, ಶಿಶು ಮಂದಿರದ ಮುಂದಿನ ಅಭಿವೃದ್ಧಿ ಕಾರ್ಯಗಳಿಗೂ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಮಕ್ಕಳ ಆಟೋಟ ಚಟುವಟಿಕೆಗಳಿಗೆ ಅಗತ್ಯವಿರುವ ಸೂಕ್ತ ವ್ಯವಸ್ಥೆ ಕಲ್ಪಿಸುವುದಾಗಿಯೂ ತಿಳಿಸಿದರು.

ಜೈ ಶ್ರೀರಾಮ ಸೇವಾ ಟ್ರಸ್ಟ್ (ರಿ.) ಅಲೆಕ್ಕಿ–ಮುಗೇರಡ್ಕ ಇದರ ಗೌರವಾಧ್ಯಕ್ಷ ಉದಯ ಭಟ್ ಕೊಳಬ್ಬೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಮುಗೇರಡ್ಕ ಮೂವರು ದೈವಗಳ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಗೌಡ ಅಂತರ, ನಿವೃತ್ತ ಸೈನಿಕ ದೇವಪ್ರಸಾದ್ ಗೌಡ ಬರೆಮೇಲು, ಜೈ ಶ್ರೀರಾಮ ಟ್ರಸ್ಟ್ ಅಧ್ಯಕ್ಷ ಅಶೋಕ ಬರುಂಗುಡೇಲು, ಮಹಿಳಾ ಮಂಡಲ ಅಧ್ಯಕ್ಷೆ ದೇಜಶ್ರೀ ಕೀಲಾರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ನಿವೃತ್ತ ಸೈನಿಕ ದೇವಪ್ರಸಾದ್ ಗೌಡ ಬರೆಮೇಲು ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವು ಗಣಪತಿ ಹೋಮದೊಂದಿಗೆ ಆರಂಭಗೊಂಡಿತು. ಬಳಿಕ ಶ್ರೀ ಬಾಲಕೃಷ್ಣ ತೊಟ್ಟಿಲು ಸಂಭ್ರಮ, ಶ್ರೀಕೃಷ್ಣ–ಬಾಲಕೃಷ್ಣ ವೇಷಧಾರಣೆ ಹಾಗೂ ರಾಧಾಕೃಷ್ಣ ಸ್ಪರ್ಧೆ ನಡೆಯಿತು. ಮಕ್ಕಳಿಗಾಗಿ ಶ್ರೀಕೃಷ್ಣ ಹಾಗೂ ರಾಧೆಯರ ವೇಷಭೂಷಣ, ನೃತ್ಯ ಸ್ಪರ್ಧೆಗಳು, ಮೊಸರು ಕುಡಿಕೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಪೋಷಕರು ಹಾಗೂ ಸಾರ್ವಜನಿಕರೂ ಸ್ಪರ್ಧೆಗಳಲ್ಲಿ ಭಾಗವಹಿಸಿದರು.

ದಿವ್ಯಶ್ರೀ ಪದ್ಮುಂಜ ಪ್ರಾರ್ಥಿಸಿದರು. ಪುಷ್ಪಲತಾ ಮಾತಾಜಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನವ್ಯಶ್ರೀ ಧನ್ಯವಾದ ಸಲ್ಲಿಸಿದರು. ಭರತೇಶ್ ಗೌಡ ಪುಣ್ಕೆದಡಿ ಕಾರ್ಯಕ್ರಮ ನಿರೂಪಿಸಿದರು.

ಟ್ರಸ್ಟಿಗಳು, ಪದಾಧಿಕಾರಿಗಳು, ಸದಸ್ಯರು, ಪೋಷಕರು ಹಾಗೂ ಮಾತಾಜಿಯವರ ಸಹಕಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭಿಮಾನಿಗಳು ಭಾಗವಹಿಸಿದ್ದರು. ನೆರೆದವರಿಗೆ ಸಿಹಿತಿಂಡಿ ಹಾಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts