tamanvi
ವಿಶೇಷ

ಸೆ.21ರಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಬರಗಾಲ ಸೇರಿ ಪ್ರಮುಖ ವಿಷಯಗಳ ಚರ್ಚೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರಗಾಲ, ಕುಡಿಯುವ ನೀರಿನ ಸಮಸ್ಯೆ, ಮೇವಿನ ಅಭಾವ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿರಂಗನ್ ವರದಿ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ವಿಸ್ತೃತ ಚರ್ಚೆ ನಡೆಸಲು ರಾಜ್ಯ ಸರ್ಕಾರ ಸೆಪ್ಟೆಂಬರ್ 21ರಿಂದ 23ರವರೆಗೆ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದಿದೆ.

ವಿಶೇಷ ಅಧಿವೇಶನದಲ್ಲಿ ಬರಗಾಲದ ಪರಿಸ್ಥಿತಿ ಹಾಗೂ ಜನರು ಮತ್ತು ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಯಲಿದೆ. ಕುಡಿಯುವ ನೀರಿನ ಕೊರತೆ ಮತ್ತು ಜಾನುವಾರುಗಳಿಗೆ ಮೇವಿನ ಅಭಾವಕ್ಕೂ ಕಲಾಪದಲ್ಲಿ ಆದ್ಯತೆ ನೀಡಲಾಗುವುದು.

ಇದರೊಂದಿಗೆ ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆ ಬಗ್ಗೆಯೂ ವಿಸ್ತೃತ ಚರ್ಚೆ ನಡೆಯಲಿದೆ. ತೋಟಗಾರಿಕೆ ಫಾರ್ಮ್‌ಗಳ ಜಮೀನು ಪರಭಾರೆ ತಿದ್ದುಪಡಿ ವಿಧೇಯಕ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಮರುಪರಿಶೀಲನೆ ಸೇರಿದಂತೆ ಹಲವು ಪ್ರಮುಖ ವಿಷಯಗಳು ವಿಶೇಷ ಅಧಿವೇಶನದಲ್ಲಿ ಚರ್ಚೆಗೆ ಬರಲಿವೆ.

ಮೂರು ದಿನಗಳ ವಿಶೇಷ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಸರ್ಕಾರ ಮುಂದಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts