ವಿಶೇಷ

ಪಡಿತರ ಇ-ಕೆವೈಸಿಗೆ ಮತ್ತಷ್ಟು ಕಾಲಾವಕಾಶ: ಅ.20ರವರೆಗೆ ಗಡುವು ವಿಸ್ತರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಹಿನ್ನೆಲೆಯಲ್ಲಿ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪೂರ್ಣಗೊಳಿಸಲು ಎದುರಾಗುತ್ತಿರುವ ಸಮಸ್ಯೆಗಳನ್ನು ಪರಿಗಣಿಸಿರುವ ರಾಜ್ಯ ಸರ್ಕಾರ, ಇ-ಕೆವೈಸಿ ಸಲ್ಲಿಕೆಯ ಅಂತಿಮ ಗಡುವನ್ನು 2026ರ ಅಕ್ಟೋಬರ್ 20ರವರೆಗೆ ವಿಸ್ತರಿಸಿದೆ.

ಈ ಕುರಿತು ಆಹಾರ ಸಚಿವ ರಿಜ್ವಾನ್ ಅರ್ಷದ್ ಆದೇಶ ಹೊರಡಿಸಿದ್ದು, ಇ-ಕೆವೈಸಿ ಕುರಿತು ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಸರ್ವರ್ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಫಲಾನುಭವಿಗಳು ಯಾವುದೇ ಗೊಂದಲಕ್ಕೊಳಗಾಗದೆ ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸಚಿವರು ಮನವಿ ಮಾಡಿದ್ದಾರೆ. ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ನ್ಯಾಯಬೆಲೆ ಅಂಗಡಿಗಳ ಸಮಯ ಬದಲಾವಣೆ

ಇದೇ ವೇಳೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯ ಸಮಯದಲ್ಲೂ ಸರ್ಕಾರ ಬದಲಾವಣೆ ಮಾಡಿದೆ. 2026ರ ಅಕ್ಟೋಬರ್ 1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 8ರವರೆಗೆ ಪಡಿತರ ವಿತರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಬಡವರು, ದಿನಗೂಲಿ ಕಾರ್ಮಿಕರು ಹಾಗೂ ಶ್ರಮಿಕ ವರ್ಗದವರ ದಿನದ ಆದಾಯಕ್ಕೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿಗಳ ಸಮಯವನ್ನು ಬದಲಾಯಿಸಲಾಗಿದೆ ಎಂದು ಆಹಾರ ಸಚಿವರು ತಿಳಿಸಿದ್ದಾರೆ.

ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಪಾರದರ್ಶಕಗೊಳಿಸುವ ಉದ್ದೇಶದಿಂದ ಈ ಎರಡು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಕಡಬ ಪಟ್ಟಣ ಪಂಚಾಯಿತಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ; ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ

ಕಡಬ : ಕರ್ನಾಟಕ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ಕಡಬ ಪಟ್ಟಣ ಪಂಚಾಯಿತಿಗೆ…

ಪುತ್ತೂರಿನ ಯುವ ಮಹಿಳಾ ನಾಯಕಿ ವಿದ್ಯಾ ಆರ್. ಗೌರಿಗೆ ಪ್ರತಿಷ್ಠಿತ ಫಾರ್ ಈಸ್ಟ್ ಏಷ್ಯಾ ಲೀಡರ್‌ಶಿಪ್ ಅವಾರ್ಡ್

ಪುತ್ತೂರು: ಪುತ್ತೂರಿನ ಪ್ರಭಾವಿ ಯುವ ಮಹಿಳಾ ನಾಯಕಿ, ನಗರಸಭೆಯ ಮಾಜಿ ಉಪಾಧ್ಯಕ್ಷೆ ವಿದ್ಯಾ ಆರ್.…

ಪಶುಪತಿ ಲೈಟ್ಸ್‌ನಲ್ಲಿ ‘ಗಾಳಿ–ಬೆಳಕು 2026’ ಸಾಲು ಸಾಲು ಹಬ್ಬಗಳ ಸಂಭ್ರಮಕ್ಕೆ ಮುಂಗಡ ಬುಕ್ಕಿಂಗ್‌ಗೂ ಭರ್ಜರಿ ಆಫರ್!

ಪುತ್ತೂರು: ಪುತ್ತೂರಿನ ಜಿಎಲ್ ಟ್ರೇಡ್ ಸೆಂಟರ್‌ನಲ್ಲಿರುವ ಪಶುಪತಿ ಲೈಟ್ಸ್, ಫ್ಯಾನ್ಸ್,…