ವಿಶೇಷ

ಸೌಜನ್ಯ ಕೊಲೆ ಪ್ರಕರಣ ಮರುತನಿಖೆಗೆ ಎಸ್‌ಐಟಿ ರಚನೆ: ಐಜಿಪಿ ಎನ್. ಶಶಿಕುಮಾರ್ ಮುಖ್ಯಸ್ಥ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ರಾಜ್ಯ ಸರಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಸೆ.24ರಂದು ಆದೇಶ ಹೊರಡಿಸಿದೆ.

ಸುಪ್ರೀಂಕೋರ್ಟ್ ಸೂಚನೆಯಂತೆ ರಚಿಸಲಾಗಿರುವ ಹೊಸ ಎಸ್‌ಐಟಿ ತಂಡಕ್ಕೆ ಪೊಲೀಸ್ ಮಹಾ ನಿರೀಕ್ಷಕ (ಐಜಿಪಿ) ಎನ್. ಶಶಿಕುಮಾರ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ತಂಡದ ಸದಸ್ಯರಾಗಿ ಮಂಗಳೂರು ಪೊಲೀಸ್ ಕಮಿಷನರ್ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ರಾಜ್ಯ ಗುಪ್ತವಾರ್ತೆಯ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ಐಪಿಎಸ್, ಬೆಂಗಳೂರು ಸಿಐಡಿ ಪೊಲೀಸ್ ಅಧೀಕ್ಷಕ ಲೋಕೇಶ್ ಜಲಸಾಗರ್ ಐಪಿಎಸ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೆಂಕಟೇಶ್ ಪ್ರಸನ್ನ ಅವರನ್ನು ನೇಮಿಸಿ ಸರಕಾರ ಆದೇಶಿಸಿದೆ.

ಹೊಸದಾಗಿ ರಚನೆಯಾಗಿರುವ ಈ ಎಸ್‌ಐಟಿ ತಂಡವು ಸೌಜನ್ಯ ಕೊಲೆ ಪ್ರಕರಣದ ಮರುತನಿಖೆ ನಡೆಸಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಭ್ಯವಿರುವ ದಾಖಲೆಗಳು ಹಾಗೂ ಇತರ ಅಂಶಗಳನ್ನು ಪರಿಶೀಲಿಸಿ ತನಿಖೆ ಮುಂದುವರಿಸುವ ಜವಾಬ್ದಾರಿ ಎಸ್‌ಐಟಿ ತಂಡಕ್ಕೆ ವಹಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪಶುಪತಿ ಲೈಟ್ಸ್‌ನಲ್ಲಿ ‘ಗಾಳಿ–ಬೆಳಕು 2026’ ಸಾಲು ಸಾಲು ಹಬ್ಬಗಳ ಸಂಭ್ರಮಕ್ಕೆ ಮುಂಗಡ ಬುಕ್ಕಿಂಗ್‌ಗೂ ಭರ್ಜರಿ ಆಫರ್!

ಪುತ್ತೂರು: ಪುತ್ತೂರಿನ ಜಿಎಲ್ ಟ್ರೇಡ್ ಸೆಂಟರ್‌ನಲ್ಲಿರುವ ಪಶುಪತಿ ಲೈಟ್ಸ್, ಫ್ಯಾನ್ಸ್,…