tamanvi
ವಿಶೇಷ

ಗೃಹಲಕ್ಷ್ಮಿ ಫಲಾನುಭವಿಗಳಿಗೆ ನವರಾತ್ರಿ ಗುಡ್‌ನ್ಯೂಸ್; 33ನೇ ಕಂತಿನ ಹಣ ಬಿಡುಗಡೆಗೆ ಗ್ರೀನ್ ಸಿಗ್ನಲ್

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಯೋಜನೆಯ 33ನೇ ಕಂತಿನ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಲು ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ಇದರಿಂದ ಈಗಾಗಲೇ ಯೋಜನೆಗೆ ಅರ್ಹರಾಗಿರುವ ಮಹಿಳಾ ಫಲಾನುಭವಿಗಳಿಗೆ 33ನೇ ಕಂತಿನ ಹಣ ಶೀಘ್ರದಲ್ಲೇ ಖಾತೆಗೆ ಜಮೆಯಾಗುವ ನಿರೀಕ್ಷೆ ಮೂಡಿದೆ.

ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ₹2,000 ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ.

ಇದೇ ವೇಳೆ, ಯೋಜನೆಯಡಿ ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪರಿಶೀಲನೆ ಸೇರಿದಂತೆ ಕೆಲವು ಬದಲಾವಣೆಗಳ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ. ಆದರೆ ಈ ಪರಿಶೀಲನೆ ಮತ್ತು ಪರಿಷ್ಕರಣೆ ಪ್ರಕ್ರಿಯೆಯ ನಡುವೆಯೂ 33ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.

ಅಧಿಕೃತ ದಿನಾಂಕ ಇನ್ನಷ್ಟೇ

33ನೇ ಕಂತಿನ ಹಣ ಯಾವ ದಿನ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂಬುದರ ಕುರಿತು ಇನ್ನೂ ಅಧಿಕೃತ ದಿನಾಂಕ ಪ್ರಕಟವಾಗಿಲ್ಲ. ಈ ಹಿನ್ನೆಲೆಯಲ್ಲಿ ಫಲಾನುಭವಿಗಳು ಸರ್ಕಾರದ ಅಧಿಕೃತ ಪ್ರಕಟಣೆ ಹಾಗೂ ಸಂಬಂಧಿತ ಮಾಹಿತಿಯನ್ನು ಗಮನಿಸುವಂತೆ ಸೂಚಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts