tamanvi
ವಿಶೇಷ

ವಿದ್ಯಾರ್ಥಿಗಳನ್ನು ಕರೆದೊಯ್ಯದೆ ಬಸ್‌ ತೆರಳಲು ಯತ್ನ: ಬಸ್‌ ಮುಂಭಾಗದಲ್ಲಿ ವಿದ್ಯಾರ್ಥಿನಿ ಪ್ರತಿಭಟನೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕೊಪ್ಪಳ: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯದೆ ಬಸ್‌ ತೆರಳಲು ಮುಂದಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಬಸ್‌ನ ಮುಂಭಾಗದಲ್ಲಿ ನಿಂತು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹ್ಯಾಟಿ–ಮುಂಡರಗಿ ಮಾರ್ಗವಾಗಿ ಕೊಪ್ಪಳಕ್ಕೆ ತೆರಳುತ್ತಿದ್ದ ಬಸ್‌ ಅನ್ನು ಬಿ.ಹೊಸಹಳ್ಳಿ ಗ್ರಾಮದ ಬಳಿ ವಿದ್ಯಾರ್ಥಿಗಳು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯೊಬ್ಬಳು ಬಸ್‌ನ ಮುಂಭಾಗದಲ್ಲಿ ನಿಂತು, ಶಾಲೆಯಲ್ಲಿ ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಬಸ್‌ ನಿಲ್ಲಿಸದೆ ತೆರಳಿದರೆ ವಿದ್ಯಾರ್ಥಿಗಳು ಶಾಲೆಗೆ ಹೇಗೆ ತೆರಳಬೇಕು ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮ ಶೈಕ್ಷಣಿಕ ಜೀವನ ಹಾಳು ಮಾಡುತ್ತೀರಾ?” ಎಂದು ಪ್ರಶ್ನಿಸಿದ ವಿದ್ಯಾರ್ಥಿನಿ, ವಿದ್ಯಾರ್ಥಿಗಳಿಗಾಗಿ ಬಸ್‌ ನಿಲ್ಲಿಸಿ ಶಾಲೆಗೆ ತೆರಳಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸುವಂತೆ ಆಗ್ರಹಿಸಿ ನಡೆದ ಈ ಪ್ರತಿಭಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರ ಗಮನ ಸೆಳೆದಿದೆ.

ವಿದ್ಯಾರ್ಥಿಗಳ ಶಾಲಾ ಸಮಯದಲ್ಲಿ ಬಸ್‌ಗಳು ನಿಲ್ದಾಣಗಳಲ್ಲಿ ನಿಲ್ಲಿಸಿ ವಿದ್ಯಾರ್ಥಿಗಳಿಗೆ ಪ್ರಯಾಣದ ಅವಕಾಶ ಕಲ್ಪಿಸಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts