ವಿಶೇಷ

ನಾಳೆ ಪುತ್ತೂರು ಸಾಹಿತ್ಯೋತ್ಸವ 2026, ಬಾಲ ಸಾಹಿತಿಗಳ ಸಾಮಾವೇಶ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: 32 ಗ್ರಾಮಗಳಲ್ಲಿ ನಡೆದ ಸಾಹಿತ್ಯ ಸಂಭ್ರಮದ ಸಮಾರೋಪ, ನಗರಸಭಾ ವ್ಯಾಪ್ತಿಯ ವಿದ್ಯಾರ್ಥಿಗಳ ಬಾಲ ಸಾಹಿತಿಗಳ ಸಮಾವೇಶ ಪುತ್ತೂರು ಸಾಹಿತ್ಯೋತ್ಸವ 2026 ಅ. 25ರಂದು ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ ಎಂದು ಕಸಾಪ ತಾಲೂಕು ಘಟಕ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಪುತ್ತೂರು ಶಿಕ್ಷಣಾಧಿಕಾರಿಗಳ ಕಚೇರಿ, ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಹಯೋಗದಲ್ಲಿ ಪುತ್ತೂರು ಸಾಹಿತ್ಯೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.

ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಅವರ ಮಹಾಪೋಷಕತ್ವದಲ್ಲಿ ತಾಲೂಕಿನ 32 ಗ್ರಾಮಗಳಲ್ಲಿ ಗ್ರಾಮ ಸಾಹಿತ್ಯ ಸಂಭ್ರಮ ನಡೆದಿದ್ದು, ಅದರ ಸಮಾರೋಪ ಹಾಗೂ ಪುತ್ತೂರು ನಗರ ವ್ಯಾಪ್ತಿಯ ಬಾಲ ಸಾಹಿತಿಗಳ ಸಮಾವೇಶವನ್ನು ಪುತ್ತೂರು ಸಾಹಿತ್ಯೋತ್ಸವದ ಹೆಸರಿನಲ್ಲಿ ನಡೆಸಲಿದ್ದೇವೆ. ಸಾಹಿತ್ಯ ಸಮ್ಮೇಳನದ ರೀತಿ ದಿನವಿಡೀ ನಡೆಯುವ ಕಾರ್ಯಕ್ರಮದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಾಯೀಶ್ವರಿ ಸರ್ವಾಧ್ಯಕ್ಷತೆ ವಹಿಸಲಿದ್ದು, ಸಾಹಿತ್ಯ ಪೋಷಕ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಸಮಾರಂಭ ಉದ್ಘಾಟಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಉದ್ಘಾಟನೆಯ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ 14 ಮಂದಿ ಸಾಧಕರು ಹಾಗೂ 2 ಸಂಸ್ಥೆಗಳಿಗೆ ಸಾಧಕ ಪುರಸ್ಕಾರ ನೀಡಲಾಗುತ್ತದೆ. ಸಾಹಿತ್ಯೋತ್ಸವದಲ್ಲಿ ಕವಿಗೋಷ್ಠಿ, ಕಥಾಗೋಷ್ಠಿ, ಪ್ರವಾಸ ಕಥನ ಮೊದಲಾದ ಸಾಹಿತ್ಯ ಚಟುವಟಿಕೆಗಳು ನಡೆಯಲಿದೆ. ಜತೆಗೆ ಬೆಂಗಳೂರಿನ ದರ್ಶನ್ ಗರ್ತಿಗೆರೆ ಅವರು ಕನ್ನಡದಲ್ಲೂ ಐಎಎಸ್ ಬರೆಯಿರಿ ಎಂಬ ವಿಚಾರದ ಕುರಿತು ಮಾಹಿತಿ ನೀಡಲಿದ್ದಾರೆ. ಸಂಜೆ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಜೀವನ್ ಎನ್. ಅವರು ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಾಹಿತ್ಯ ಪೋಷಕ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ, ಪುತ್ತೂರು ಸಾಹಿತ್ಯೋತ್ಸವದ ಸಂಚಾಲಕ ಡಾ. ಹರ್ಷಕುಮಾರ್ ರೈ, ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕ ನಾರಾಯಣ ಕುಂಬ್ರ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪಶುಪತಿ ಲೈಟ್ಸ್‌ನಲ್ಲಿ ‘ಗಾಳಿ–ಬೆಳಕು 2026’ ಸಾಲು ಸಾಲು ಹಬ್ಬಗಳ ಸಂಭ್ರಮಕ್ಕೆ ಮುಂಗಡ ಬುಕ್ಕಿಂಗ್‌ಗೂ ಭರ್ಜರಿ ಆಫರ್!

ಪುತ್ತೂರು: ಪುತ್ತೂರಿನ ಜಿಎಲ್ ಟ್ರೇಡ್ ಸೆಂಟರ್‌ನಲ್ಲಿರುವ ಪಶುಪತಿ ಲೈಟ್ಸ್, ಫ್ಯಾನ್ಸ್,…

ಪುತ್ತೂರಿನ ಯುವ ಮಹಿಳಾ ನಾಯಕಿ ವಿದ್ಯಾ ಆರ್. ಗೌರಿಗೆ ಪ್ರತಿಷ್ಠಿತ ಫಾರ್ ಈಸ್ಟ್ ಏಷ್ಯಾ ಲೀಡರ್‌ಶಿಪ್ ಅವಾರ್ಡ್

ಪುತ್ತೂರು: ಪುತ್ತೂರಿನ ಪ್ರಭಾವಿ ಯುವ ಮಹಿಳಾ ನಾಯಕಿ, ನಗರಸಭೆಯ ಮಾಜಿ ಉಪಾಧ್ಯಕ್ಷೆ ವಿದ್ಯಾ ಆರ್.…

ಕಡಬ ಪಟ್ಟಣ ಪಂಚಾಯಿತಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ; ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ

ಕಡಬ : ಕರ್ನಾಟಕ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ಕಡಬ ಪಟ್ಟಣ ಪಂಚಾಯಿತಿಗೆ…