ನವದೆಹಲಿ: ಕಾಶ್ಮೀರದ ಪಹಲ್ಲಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ 28 ಜನ ಪ್ರಾಣವನ್ನು ಕಳೆದುಕೊಂಡಿದ್ದಾರೆ.ಇದರ ಬೆನ್ನಲ್ಲೇ ಭಯೋತ್ಪಾದಕ ದಾಳಿಯನ್ನು ಭಾರತೀಯ ಕ್ರಿಕೆಟಿಗರು ಮತ್ತು ಹಲವಾರು ಸೆಲೆಬ್ರಿಟಿಗಳು ಖಂಡಿಸಿದ್ದಾರೆ.
ಇದೀಗ ಪಾಕಿಸ್ತಾನದೊಂದಿಗಿನ ದ್ವಿಪಕ್ಷೀಯ ಕ್ರಿಕೆಟ್ ಸರಣಿಯ ನಿರ್ಧಾರವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೈಬಿಟ್ಟಿದೆ.ಸ್ಪೋರ್ಟ್ಸ್ ತಕ್ ಜೊತೆ ಮಾತನಾಡಿದ ರಾಜೀವ್ ಶುಕ್ಲಾ, ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಸರಣಿಯಲ್ಲಿ ತೊಡಗುವುದಿಲ್ಲ. ಕ್ರಿಕೆಟ್ ಸಂಬಂಧಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನವನ್ನು ಮಂಡಳಿ ಅನುಸರಿಸುತ್ತದೆ. ಜಾಗತಿಕ ಐಸಿಸಿ ಪಂದ್ಯಾವಳಿಗಳಲ್ಲಿ ಎರಡೂ ದೇಶಗಳು ಸಾಂದರ್ಭಿಕವಾಗಿ ಭೇಟಿಯಾಗಿದ್ದರೂ ನೀತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಅವರು ಒತ್ತಿ ಹೇಳಿದರು.