ಪುತ್ತೂರು: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇದರ ವತಿಯಿಂದ ಬೆಂಗಳೂರಿನಲ್ಲಿ ನಡೆದ 2025-26 ನೇ ಸಾಲಿನ 17ರ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ತೆಂಕಿಲ ಕನ್ನಡ ಮಾದ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ರುತಿಕ್ ಪೂಜಾರಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ ಜಿಲ್ಲೆ ಇದರ ವತಿಯಿಂದ 2025 – 26ನೇ ಸಾಲಿನ ಪಂಜದಲ್ಲಿ ನಡೆದ ಪ್ರಾಥಮಿಕ ಮತ್ತು ಫ್ರೌಡ ಶಾಲಾ ಜಿಲ್ಲಾ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಉದ್ದಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರುತಿಕ್ ಪೂಜಾರಿ ಅತ್ಯುತ್ತಮ ಕ್ರೀಡಾಪಟುವಾಗಿದ್ದು ಹಲವಾರು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಪದಕ ಪಡೆದುಕೊಂಡಿದ್ದಾರೆ. ಇವರು ಆನಂತಾಡಿಯ ಬೊಗ್ಗಂಡ ಚಂದ್ರಶೇಖರ ಕರ್ಕೇರ ಮತ್ತು ಸುಮಿತ್ರಾ ದಂಪತಿಗಳ ಪುತ್ರ. ಇವರಿಗೆ ವಿವೇಕಾನಂದ ಕನ್ನಡ ಮಾದ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ ಕಜೆ ಮತ್ತು ಹರಿಣಾಕ್ಷಿ ತರಬೇತಿ ನೀಡಿದ್ದಾರೆ.



























