tamanvi
ಕ್ರೀಡೆ

ಕುಮಾರ್ ಪೆರ್ನಾಜೆಗೆ ಪುತ್ತೂರು ಕಂಬಳದಲ್ಲಿ ಸನ್ಮಾನ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: 33ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದಲ್ಲಿ ಬೋರ್ಡೋ ದ್ರಾವಣ ಟೆಕ್ನಿಕ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಕುಮಾರ್ ಪೆರ್ನಾಜೆ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೋಕ್ ಕುಮಾರ್ ರೈ, ಕಂಬಳ ಸಮಿತಿಯ ಗೌರವಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಅವರು ಪೇಟ ತೊಡಿಸಿ ಶಾಲು ಹೊದಿಸಿ ಸನ್ಮಾನಿಸಿದರು. ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ. ಸನ್ಮಾನ ಪತ್ರವಾಚಿಸಿದರು.

ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ಕೋಟಿ ಚೆನ್ನಯ ಜೋಡುಕರೆ  ಕಂಬಳ ಸಮಿತಿ ಕೋಶಾಧಿಕಾರಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಕಂಬಳದ ತೀರ್ಪುಗಾರ ಗುಣಪಾಲ ಕಡಂಬ, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮದ್ ಬಡಗನ್ನೂರು, ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಮೌರಿಸ್ ಮಸ್ಕರೆನಸ್, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮದ್, ಜಿಲ್ಲಾ  ಸೆಷನ್ಸ್ ನ್ಯಾಯಾಧೀಶೆ ಸರಿತ, ನ್ಯಾಯಾಧೀಶೆ ಪ್ರಕೃತಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ಅಲಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಮಲ್ಲಿಕಾ ಪಕ್ಕಳ, ಚಲನಚಿತ್ರ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕಂಬಳ! ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ‌ ಶಾಸಕ ಅಶೋಕ್ ರೈ ಭಾಗಿ

ಮೈಸೂರು ದಸರಾ ಕಾರ್ಯಕ್ರಮದ ಬಗ್ಗೆ ಸಚಿವ ಸಂಪುಟದ ಪೂರ್ವಭಾವಿ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ…