tamanvi
ಕ್ರೀಡೆ

ಕಬಡ್ಡಿಯಲ್ಲಿ ಲಿಟ್ಲ್ ಫ್ಲವರ್ ಶಾಲೆಯ ಬಾಲಕಿಯರ ಸಾಧನೆ: ತಾಲೂಕು ಮಟ್ಟಕ್ಕೆ ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸಂತ ವಿಕ್ಟರ್ ಬಾಲಕಿಯರ ಪ್ರೌಢಶಾಲೆ, ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯ ಬಾಲಕಿಯರು ಉತ್ತಮ ಸಾಧನೆ ಮಾಡಿದ್ದಾರೆ.

14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಲಿಟ್ಲ್ ಫ್ಲವರ್ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ತಂಡದ ಆಟಗಾರ್ತಿಯರಾದ ಹಾರ್ದಿಕ ಪಿ. ಅವರು ‘ಸವ್ಯಸಾಚಿ ಆಟಗಾರ್ತಿ’ ಪ್ರಶಸ್ತಿ ಹಾಗೂ ಜುಏನಾ ಡ್ಯಾಝಲ್ ಕುಟಿನ್ಹ ಅವರು ‘ಉತ್ತಮ ದಾಳಿಗಾರ್ತಿ’ ಪ್ರಶಸ್ತಿಯನ್ನು ಪಡೆದುಕೊಂಡರು.

ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಅನಿತಾ ಟ್ರೆಸ್ಸಿ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ರಾಷ್ಟ್ರೀಯ ಕಬಡ್ಡಿ ತರಬೇತುದಾರ ಬಾಲಕೃಷ್ಣ ರೈ ಪೊರ್ದಾಲ್ ಅವರು ವಿದ್ಯಾರ್ಥಿನಿಯರಿಗೆ ತರಬೇತಿ ನೀಡುತ್ತಿದ್ದಾರೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕಂಬಳ! ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ‌ ಶಾಸಕ ಅಶೋಕ್ ರೈ ಭಾಗಿ

ಮೈಸೂರು ದಸರಾ ಕಾರ್ಯಕ್ರಮದ ಬಗ್ಗೆ ಸಚಿವ ಸಂಪುಟದ ಪೂರ್ವಭಾವಿ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ…