ಜಾಲ್ಸೂರು : ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ತಾಲೂಕು ಹಾಗೂ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸುಳ್ಯ ಇವರ ಸಹಯೋಗದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡದ ವಿದ್ಯಾರ್ಥಿನಿಯರಾದ ಸಹನಾ, ಹೇಮಾನ್ಯ, ಹೇಮಶ್ರೀ, ಸಾತ್ವಿ ಹಾಗೂ ದಿಶಾ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ತಂಡದ ಆಟಗಾರ್ತಿ ಸಹನಾ ಅವರು ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿ ಉತ್ತಮ ಆಲ್‌ರೌಂಡರ್ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿನಿಯರ ಸಾಧನೆಗೆ ಆಡಳಿತ ಮಂಡಳಿ, ಪೋಷಕ ವೃಂದ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.























