tamanvi
ಕ್ರೀಡೆ

ಲಿಟ್ಲ್ ಫ್ಲವರ್ ಶಾಲೆಯ ಬಾಲಕಿಯರ ಕಬಡ್ಡಿ ತಂಡಕ್ಕೆ ಸತತ 8ನೇ ಬಾರಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಸತತ 8ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.

ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ ಆಡಳಿತ ದಕ್ಷಿಣ ಕನ್ನಡ, ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಕಾರಂದೂರು, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿತ್ತು.

14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಲಿಟ್ಲ್ ಫ್ಲವರ್ ಶಾಲೆ ದರ್ಬೆ ತಂಡ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸಿತು. ಇದರೊಂದಿಗೆ ತಂಡ ಸತತ 8ನೇ ಬಾರಿಗೆ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದೆ.

ತಂಡದಲ್ಲಿ ಉಮ್ಮುನಿಧಾ, ಉದ್ವಿತಾ, ರಕ್ಷಾ, ಶೃಜ್ಞಾ ಪಿ. ಆಳ್ವ, ಖುಶಿ, ಯಶಸ್ವಿ, ಪಿ.ಯು.ಆರ್. ಪರಿಣಿತ, ಪ್ರಣಮ್ಯ ರೈ, ಹರ್ಷಿತ, ವೆಂಕಟೇಶ್ ಬುರುಡಿ, ತನ್ವಿಕಾ, ಇಂಚರ, ದೃತಿ ಕೆ. ಹಾಗೂ ಚೈತಾಲಿ ಯಂ ಭಾಗವಹಿಸಿದ್ದರು.

ತಂಡದ ಉಮ್ಮುನಿಧಾ ಅವರು ಸವ್ಯಸಾಚಿ ಆಟಗಾರ್ತಿ ಪ್ರಶಸ್ತಿ ಪಡೆದರೆ, ದಿಶಾ ಅವರು ಉತ್ತಮ ಹಿಡಿತಗಾರ್ತಿ ಪ್ರಶಸ್ತಿಗೆ ಭಾಜನರಾದರು.

ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಐರಿನ್ ವೇಗಸ್ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ರಾಷ್ಟ್ರೀಯ ಕಬಡ್ಡಿ ತರಬೇತುದಾರ ಬಾಲಕೃಷ್ಣ ರೈ ಪೊರ್ದಾಲ್ ಅವರು ತಂಡಕ್ಕೆ ತರಬೇತಿ ನೀಡುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕಂಬಳ! ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ‌ ಶಾಸಕ ಅಶೋಕ್ ರೈ ಭಾಗಿ

ಮೈಸೂರು ದಸರಾ ಕಾರ್ಯಕ್ರಮದ ಬಗ್ಗೆ ಸಚಿವ ಸಂಪುಟದ ಪೂರ್ವಭಾವಿ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ…