Gl harusha
ಕ್ರೀಡೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ

ಖ್ಯಾತ ಜಾವೆಲಿನ್ ಪಟು ಹಾಗೂ ಡಬಲ್ ಒಲಿಂಪಿಕ್ಸ್ ಪದಕ ವಿಜೇತ ನೀರಜ್ ಚೋಪ್ರಾ ಹಿಮಾನಿ ಮೊರ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 

ಈ ಸುದ್ದಿಯನ್ನು ಶೇರ್ ಮಾಡಿ

ಖ್ಯಾತ ಜಾವೆಲಿನ್ ಪಟು ಹಾಗೂ ಡಬಲ್ ಒಲಿಂಪಿಕ್ಸ್ ಪದಕ ವಿಜೇತ ನೀರಜ್ ಚೋಪ್ರಾ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ನೀರಜ್ ಹಿಮಾನಿ ಮೋರ್ ಅವರೊಂದಿಗೆ ಆಪ್ತರು ಹಾಗೂ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆ.

ನಾನು ನನ್ನ ಕುಟುಂಬದೊಂದಿಗೆ ನನ್ನ ಜೀವನದ ಹೊಸ ಅಧ್ಯಾಯವನ್ನು ಪ್ರಾರಂಭಿಸಿದೆ. ಈ ಕ್ಷಣದಲ್ಲಿ ಪ್ರತಿಯೊಬ್ಬರ ಆಶೀರ್ವಾದಕ್ಕೂ ನಾನು ಕೃತಜ್ಞನಾಗಿದ್ದೇನೆ. ಪ್ರೀತಿಯಿಂದ ಬಂಧಿತನಾಗಿದ್ದೇನೆ, ಸಂತೋಷದಿಂದ ಎಂದೆಂದಿಗೂ’ ಎಂದು ನೀರಜ್ ಮದುವೆ ಸಮಾರಂಭದ ಚಿತ್ರಗಳೊಂದಿಗೆ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಹರಿಯಾಣದ ಸೋನಿಪತ್ ಮೂಲದವರಾಗಿರುವ ನೀರಜ್ ಚೋಪ್ರಾ ಪತ್ನಿ ಹಿಮಾನಿ ಮೋರ್ ಟೆನಿಸ್‌ ಆಟಗಾರ್ತಿಯಾಗಿದ್ದಾರೆ. ಪ್ರಸ್ತುತ ಅವರು ಅಮೆರಿಕದ ನ್ಯೂ ಹ್ಯಾಂಪ್‌ಶೈರ್‌ನಲ್ಲಿರುವ ಫ್ರಾಂಕ್ಲಿನ್ ಪಿಯರ್ಸ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ.

ಮದುವೆ ಎರಡು ದಿನಗಳ ಹಿಂದೆಯೇ ನಡೆದಿದೆ. ನವ ದಂಪತಿ ಹನಿಮೂನ್‌ಗೆ ತೆರಳಿದ್ದಾರೆ ಎಂದು ನೀರಜ್ ಚಿಕ್ಕಪ್ಪ ಭೀಮ್ ತಿಳಿಸಿದ್ದಾರೆ

2 ಬಾರಿ ಒಲಿಂಪಿಕ್ಸ್ ಪದಕ:

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದಿದ್ದ ನೀರಜ್‌, ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಈ ಮೂಲಕ ಅಥ್ಲೆಟಿಕ್ಸ್‌ನಲ್ಲಿ ಸತತ 2 ಪದಕ ಗೆದ್ದ ಏಕೈಕ ಭಾರತೀಯ ಕ್ರೀಡಾಪಟು ಎನಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಪುತ್ತೂರಿನಲ್ಲಿ ಇದೇ ಮೊದಲ ಬಾರಿಗೆ ಕಾರ್ ರೇಸ್ ಚಮತ್ಕಾರ!ಫೆ. 9ರಂದು ಆತೂರಿನಲ್ಲಿ ನಡೆಯಲಿದೆ ಆಟೋ ಕ್ರಾಸ್ ಡರ್ಟ್ ರೇಸಿಂಗ್!

ಮೂಡುಬಿದರೆಯಲ್ಲಿ ನಡೆಯುತ್ತಿದ್ದ ಆಟೋ ಕ್ರಾಸ್ ಡರ್ಟ್ ರೇಸಿಂಗ್ ಈ ಬಾರಿ ಪುತ್ತೂರಿನ ಆತೂರಿನಲ್ಲಿ…