Friday, November 22
Share News

ಬೆಂಗಳೂರು: ರಾಜಾಜಿನಗರದ ಶ್ರೀರಾಮಮಂದಿರದಲ್ಲಿ  ಕರ್ನಾಟಕದ ಅತಿ ಎತ್ತರದ 63 ಅಡಿ ಉದ್ದದ ಶ್ರೀರಾಮಾಂಜನೇಯ ಪ್ರತಿಮೆಯ ಚರ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಅ.21ರಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ನೆರವೇರಲಿದೆ. 23 ರಂದು ವಿಧ್ಯುಕ್ತವಾಗಿ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ.

ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ನಿರ್ಮಲಾನಂದನಾಥ ಸ್ವಾಮೀಜಿರವರ ದಿವ್ಯ ಸಾನಿಧ್ಯದಲ್ಲಿ ಈ ಮೂರ್ತಿ ಲೋಕಾರ್ಪಣೆಯಾಗಲಿದೆ. ರಾಜ್ಯದ ಪ್ರಮುಖ ಧಾರ್ಮಿಕ ಮುಖಂಡರು, ಧರ್ಮಗುರುಗಳು, ರಾಜಕೀಯ ನೇತರಾರರ ಸಮ್ಮುಖದಲ್ಲಿ, ಭಕ್ತರ ಅಮಿತೋತ್ಸಾಹದ ನಡುವೆ ಮೂರ್ತಿ ಪ್ರತಿಷ್ಠಾಪನೆ ನೆರವೇರಲಿದೆ.

21ರಂದು ಸಂಜೆ ಗಣಪತಿಪೂಜೆ, ವಿದ್ವಜ್ಜನ ಪ್ರಾರ್ಥನೆ, ದೇವತಾ ಪ್ರಾರ್ಥನೆ, ಕಳಸ ಪ್ರತಿಷ್ಟಾಪನೆ ಕಾರ್ಯ ಶುಭಾರಂಭವಾಗಲಿದೆ. 22 ರಂದು ಬೆಳಗ್ಗೆ 63ಅಡಿಯ ಶ್ರೀರಾಮಾಂಜನೇಯ ಚರಪ್ರತಿಷ್ಟಾನದ ಪೂಜೆ, ಹೋಮ ಸಂಕಲ್ಪವನ್ನು ಸಿದ್ದಗಂಗಾಮಠ ಸಿದ್ದಲಿಂಗಾಮಹಾಸ್ವಾಮೀಜಿ ನೇತೃತ್ವದಲ್ಲಿ ಪ್ರಾರಂಭವಾಗಲಿದೆ.


Share News

Comments are closed.

Exit mobile version