ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ-2ರ ಫಲಿತಾಂಶ ಫಲಿತಾಂಶ ಬುಧವಾರ ಪ್ರಕಟವಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಲು ಈ ವರ್ಷ 2ನೇ ಬಾರಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್ಸೈಟ್ http://kseab.karnataka.gov.in ಮತ್ತು http://karresults.nic.in ನಲ್ಲಿ ತಮ್ಮ ಅಂಕಗಳನ್ನು ಪರಿಶೀಲಿಸಬಹುದಾಗಿದೆ. ವಿದ್ಯಾರ್ಥಿಗಳು ಫಲಿತಾಂಶಗಳನ್ನು ಪರಿಶೀಲಿಸಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.
ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿದ ನಂತರ ಮತ್ತು ಫಲಿತಾಂಶದ ಲಿಂಕ್ ಅನ್ನು ತೆರೆದ ನಂತರ, ವಿದ್ಯಾರ್ಥಿಗಳು ತಮ್ಮ ಜನ್ಮ ದಿನಾಂಕ (DOB) ಮತ್ತು ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು.
ಕರ್ನಾಟಕ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ಜೂನ್ 14 ಮತ್ತು ಜೂನ್ 21ರ ಅವಧಿಯಲ್ಲಿ ನಡೆದಿದ್ದವು. 1.29 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.