ಹೊಸ ರೇಷನ್ ಕಾರ್ಡ್ ಪಡೆಯುವ ಆಸೆ ಇಟ್ಟುಕೊಂಡಿರುವವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಸರ್ಕಾರದಿಂದ ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಅನ್ನು ಹಂಚಿಕೆ ಮಾಡಲ್ಲ ಎಂದು ಆಹಾರ ಸಚಿವ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಅಶೋಕ್ ಕುಮಾರ್ ರೈ ಮತ್ತು ವೇದವ್ಯಾಸ ಕಾಮತ್ ಪ್ರಶ್ನೆಗೆ ಉತ್ತರ ನೀಡಿದ ಮುನಿಯಪ್ಪ, ರಾಜ್ಯದಲ್ಲಿ ಕೇಂದ್ರ ನಿಗದಿ ಮಾಡಿದ್ದ ಕಾರ್ಡ್ ಗುರಿ ಮುಕ್ತಾಯವಾಗಿದೆ. ಹೊಸ ಕಾರ್ಡ್ ಕೊಡಲು ಅವಕಾಶ ಇಲ್ಲ. ಅನರ್ಹರ ಕಾರ್ಡ್ ರದ್ದು ಮಾಡೋವರೆಗೂ ಹೊಸ ಕಾರ್ಡ್‌ಗಳು ಕೊಡಲ್ಲ ಎಂದು ತಿಳಿಸಿದ್ದಾರೆ.