Gl jewellers
ರಾಜ್ಯ ವಾರ್ತೆ

ಖಾಸಗಿ ವಾಹನದಲ್ಲಿ ‘ಪೊಲೀಸ್’ ಎಂದು ಬರೆದಿದ್ದರೆ ಕ್ರಮ! ವಿಧಾನಸೌಧದಲ್ಲಿ ಗಮನ ಸೆಳೆದ ಗೃಹ ಸಚಿವರ ರಿಪ್ಲೈ!!

ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್‌ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೆ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್‌ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೆ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

Papemajalu garady
Karnapady garady

ಶ್ರವಣ ಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 561ಕ್ಕೆ ಲಿಖಿತವಾಗಿ ಸಚಿವ ಡಾ. ಜಿ ಪರಮೇಶ್ವ‌ರ್ ಉತ್ತರಿಸಿದ್ದಾರೆ.

ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್‌ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ ಎಂಬ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವ ಉತ್ತರಿಸಿದ್ದು, ರಾಜ್ಯದ ಪೊಲೀಸ್‌ ಇಲಾಖೆಯ ಅಧಿಕಾರಿಗಳು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಉತ್ತರ ನೀಡಿದ್ದಾರೆ.

ಹಾಗಿದ್ದಲ್ಲಿ, ಸ್ವಂತ ವಾಹನಗಳ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಕೆಲ ಪೊಲೀಸ್ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಉಲ್ಲಂಘನೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ, ಇವರ ವಿರುದ್ಧ ಸರ್ಕಾರ ತೆಗೆದುಕೊಂಡಿರುವ ಕ್ರಮಗಳೇನು? ಎಂಬ ಪ್ರಶ್ನೆಗೆ ತಮ್ಮ ಸ್ವಂತ ವಾಹನಗಳ ಮೇಲೆ ಪೊಲೀಸ್ ಎಂದು ಬರೆಸಿಕೊಂಡಿರುವುದು ಗೃಹ ಇಲಾಖೆಯ ಗಮನಕ್ಕೆ ಬಂದಿದೆ. ಸ್ವಂತ ವಾಹನದ ಮೇಲೆ ಪೊಲೀಸ್ ಅಧಿಕಾರಿಗಳು ಹಾಗೂ ನೌಕರರು ಪೊಲೀಸ್‌ ಎಂದು ಬರೆಸಿದ್ದರೇ ಅವರ ವಿರುದ್ಧ 2022ರ ಸರ್ಕಾರದ ಸುತ್ತೋಲೆ ಪ್ರಕಾರ ಕಾನೂನು ಕ್ರಮ ಆಗುತ್ತದೆ ಎಂದು ಗೃಹ ಸಚಿವ ಲಿಖಿತ ಉತ್ತರ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts