ಅನ್ನಭಾಗ್ಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು ಈ ತಿಂಗಳು 15 ಕೆಜಿ ಅಕ್ಕಿ ವಿತರಣೆಗೆ ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತೀರ್ಮಾನಿಸಿದೆ.
ಹೌದು, ರಾಜ್ಯ ಸರ್ಕಾರ ಜಾರಿ ಮಾಡಿರುವ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಫೆಬ್ರವರಿ ತಿಂಗಳಲ್ಲಿ ಬಾಕಿಯಿದ್ದ ಹೆಚ್ಚುವರಿ 5 ಕೆ.ಜಿ.ಯನ್ನು ಸೇರಿಸಿ ಈ ತಿಂಗಳು ಒಟ್ಟು 15 ಕೆ.ಜಿ. ಅಕ್ಕಿ ವಿತರಣೆ ಮಾಡಲು ಇಲಾಖೆಯು ತೀರ್ಮಾನಿಸಿದೆ.
ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಹೆಚ್ಚುವರಿ 5 ಕೆ.ಜಿ.ಅಕ್ಕಿಗೆ ಪರ್ಯಾಯವಾಗಿ ನೀಡಲಾಗುತ್ತಿದ್ದ ಹಣದ ಬದಲು ಫೆಬ್ರವರಿ ತಿಂಗಳಿನಿಂದಲೇ ಅನ್ವಯ ಆಗುವಂತೆ ಅಕ್ಕಿ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿತ್ತು. ಆದರೆ, ಸರ್ಕಾರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದು ವಿಳಂಬವಾದ ಹಿನ್ನೆಲೆ ಫೆಬ್ರವರಿಯಲ್ಲಿ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆ.ಜಿ. ಅಕ್ಕಿ ಹಂಚಿಕೆ ಆಗಿರಲಿಲ್ಲ. ಡಿಬಿಟಿ ಮೂಲಕ ಹಣವೂ ಜಮಾ ಆಗಿರಲಿಲ್ಲ. ಆದ್ದರಿಂದ ಫೆಬ್ರವರಿ ತಿಂಗಳಲ್ಲಿ ಬಾಕಿ ಉಳಿದಿದ್ದಾ ಹೆಚ್ಚುವರಿ 5 ಕೆ.ಜಿ. ಅಕ್ಕಿ ಮತ್ತು ಮಾರ್ಚ್ ತಿಂಗಳ 10 ಕೆ.ಜಿ. ಅಕ್ಕಿ ಸೇರಿಸಿ ಒಟ್ಟು 15 ಕೆ.ಜಿ. ಅಕ್ಕಿಯನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಹಂಚಿಕೆ ಮಾಡಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಸೂಚನೆ ನೀಡಿದ್ದಾರೆ.