Gl
ರಾಜ್ಯ ವಾರ್ತೆ

ರಾಮೇಶ್ವರಂ ಕೆಫೆ ಬ್ಲಾಸ್ಟ್’ಗೂ ಮಂಗಳೂರು ಕುಕ್ಕರ್ ಬ್ಲಾಸ್ಟ್‌ಗೂ ಸಂಬಂಧ ಇಲ್ಲ: ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು: ರಾಜಧಾನಿಯ ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣಕ್ಕೂ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್‌ ಬ್ಲಾಸ್ಟ್‌ಗೂ ಸಂಬಂಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಬಿಜೆಪಿಯವರ ಅವಧಿಯಲ್ಲಾದ ಬಾಂಬ್‌ ಬ್ಲಾಸ್ಟ್‌ಗಳು ಅಲ್ಪಸಂಖ್ಯಾತರ ಓಲೈಕೆಗಾಗಿ ನಡೆದಿದ್ದೇ? ಎಂದು ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

Pashupathi

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಾಂಬ್ ಬ್ಲಾಸ್ಟ್ ಆಗಿರುವುದು ನಿಜ. ಮಾಸ್ಕ್, ಟೋಪಿ‌ ಹಾಕಿಕೊಂಡು ವ್ಯಕ್ತಿಯೊಬ್ಬ ಬಸ್‌ನಲ್ಲಿ ಬಂದಿದ್ದಾನೆ. ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಮಂಗಳೂರು ಬಾಂಬ್ ಬ್ಲಾಸ್ಟ್‌ಗೂ ಈ ಬ್ಲಾಸ್ಟ್‌ಗೂ ಯಾವುದೇ ಸಂಬಂಧವಿಲ್ಲ. ಈ ಬ್ಲಾಸ್ಟ್ ಮಾಡಿದ್ದನ್ನು ಖಂಡಿಸುತ್ತೇನೆ. ಬಾಂಬ್ ಬ್ಲಾಸ್ಟ್ ಸಂಬಂಧ ಇನ್ನೂ ತನಿಖೆ ನಡೆಯುತ್ತಿದೆ. ವರದಿ ಬಳಿಕ ಬಳಿಕ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದು‌ ಎಂದು ಹೇಳಿದರು.

akshaya college

ಘಟನೆ ನಡೆದ ದಿನವಾದ ಶುಕ್ರವಾರ (ಮಾ. 1) ಡಿಸಿಎಂ ಡಿ.ಕೆ. ಶಿವಕುಮಾರ್,‌ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಭೇಟಿ ನೀಡಿದ್ದಾರೆ. ನಾನು ಕೂಡ ಇಂದು ಆಸ್ಪತ್ರೆಗೆ ಹಾಗೂ ಸ್ಥಳಕ್ಕೆ ಹೋಗುತ್ತೇನೆ. ಇದು ಸಂಘಟನೆಯ ಕೆಲಸವೋ ಇಲ್ಲವೋ ಗೊತ್ತಿಲ್ಲ. ಸೀರಿಯಸ್ ಆಗಿ ತನಿಖೆ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ಅವಧಿಯಲ್ಲಿ ಬಾಂಬ್‌ ಬ್ಲಾಸ್ಟ್‌ ಆಗಿತ್ತಲ್ಲವೇ?
ಅಲ್ಪಸಂಖ್ಯಾತರ ಓಲೈಕೆಗಾಗಿ ಈ ಕೃತ್ಯ ನಡೆದಿದೆ ಎಂಬ ಬಿಜೆಪಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರ ಅವಧಿಯಲ್ಲಿ ಬಾಂಬ್ ಬ್ಲಾಸ್ಟ್ ಆಗಿತ್ತಲ್ಲವೇ? ಅದೂ ಅಲ್ಪಸಂಖ್ಯಾತರ ಓಲೈಕೆ ಕಾರಣಕ್ಕೇ ಆಗಿತ್ತಾ? ಎಂದು ಪ್ರಶ್ನೆ ಮಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಈ ವಿಷಯದಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಒಲ್ಲದ ಮದುವೆ, ನಿಲ್ಲದ ಪ್ರೇಮ | ತಾಳಿ ಕಟ್ಟೋ ವೇಳೆ ಮುರಿದ ಮದುವೆ, ಸಂಜೆಗೆ ಪ್ರೇಮಿ ಜೊತೆ ನೆರವೇರಿತು

ಹಾಸನ: ಮೂರು ತಿಂಗಳ ಹಿಂದೆ ನಿಶ್ಚಯವಾಗಿ ಇಂದು ನಡೆಯಬೇಕಿದ್ದ ಮದುವೆಯನ್ನು ತಾಳಿ ಕಟ್ಟುವ ವೇಳೆ…