ಬೆಂಗಳೂರು: ಸೇವೆ ಕಾಯಂ ನಿರೀಕ್ಷೆಯಲ್ಲಿದ್ದ ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಮೇ 1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.
ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮೇ1 ಕಾರ್ಮಿಕರ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪೌರ ಕಾರ್ಮಿಕರು ಮಾತ್ರವಲ್ಲದೇ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂಮಾಡಲಾಗುವುದು ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು. ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.