Gl harusha
ರಾಜ್ಯ ವಾರ್ತೆ

ಹಿರಿಯ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ ನಿಧನ!

ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ಅವರು ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ಅವರು ನಿಧನರಾಗಿದ್ದಾರೆ.
ಏ.13 ರ ರವಿವಾರ ಮಧ್ಯರಾತ್ರಿ ಸುಮಾರು 2.30ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದರು.
ಇಂದು (ಏ.14ರ ಸೋಮವಾರ) ಬೆಳಗ್ಗೆ 10 ಗಂಟೆಗೆ ನಟ ಬ್ಯಾಂಕ್‌ ಜನಾರ್ಧನ್‌ ಅವರ ಮನೆ ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲದಗಳು ತಿಳಿಸಿದೆ.
1948ರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಚಿತ್ರದುರ್ಗದ ಹೊಳಲ್​ಕೆರೆಯಲ್ಲಿ ಜನಿಸಿದರು. 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ‘ಬೆಟ್ಟದ ತಾಯಿ’, ‘ಪೊಲೀಸ್ ಹೆಂಡತಿ’, ‘ಶ್​..’, ‘ತರ್ಲೆ ನನ್ಮಗ’, ಬೆಳ್ಳಿಯಪ್ಪ ಬಂಗಾರಪ್ಪ, ಜೀ ಬೂಂಬಾ, ಗಣೇಶ ಸುಬ್ರಮಣ್ಯ, ಕೌರವ ಸೇರಿದಂತೆ 500ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ನಟಿಸಿದ್ದರು.
2016ರ ನಂತರ ಅವರು ಚಿತ್ರರಂಗದಲ್ಲಿ ಸಕ್ರೀಯರಾಗಿರಲ್ಲಿಲ್ಲ. 2022ರ ‘ಮಠ’ ಹಾಗೂ 2023ರ ‘ಉಂಡೇನಾಮ’ ಚಿತ್ರದಲ್ಲಿ ಅವರು ನಟಿಸಿದ್ದರು.
ಹಿರಿತೆರೆ ಜೊತೆ ಕಿರುತೆರೆಯಲ್ಲಿಯೂ ಬ್ಯಾಂಕ್ ಜನಾರ್ಧನ್ ಕೆಲಸ ಮಾಡಿದ್ದಾರೆ. ಪಾಪ ಪಾಂಡು, ಜೋಕಾಲಿ, ರೋಬೋ ಫ್ಯಾಮಿಲಿ, ಮಾಂಗಲ್ಯ ಧಾರಾವಾಹಿಗಳಲ್ಲಿಯೂ ಬ್ಯಾಂಕ್ ಜನಾರ್ಧನ್ ನಟಿಸಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts