Gl harusha
ರಾಜ್ಯ ವಾರ್ತೆ

KSRTC ಬಸ್‌ಗಳಲ್ಲಿ ತಂಬಾಕು, ಸಿಗರೇಟು ಜಾಹೀರಾತು: ಮುಖ್ಯಮಂತ್ರಿ ಕಚೇರಿಯಿಂದ ಬಂತು ಖಡಕ್ ಸೂಚನೆ!!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ.

srk ladders
Pashupathi
Muliya

ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್‌ ಕೂಡ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ‘ಎಕ್ಸ್’ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಕೂಡಲೇ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶನ ಮಾಡದಂತೆ ಸಂಬಂಧಪಟ್ಟ ಪರವಾನಗಿದಾರರಿಗೆ ನೋಟಿಸ್‌ ನೀಡಿದ್ದಾರೆ. ಜೊತೆಗೆ ಬಸ್‌ಗಳಲ್ಲಿ ಅಳವಡಿಸಲಾಗಿದ್ದ ಕೂಲ್ ಲಿಪ್ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಕ್ರಮಕೈಗೊಳ್ಳಲಾಗಿದೆ.

ಇನ್ನು ಮುಂದೆ ಇಂತಹ ಜಾಹೀರಾತುಗಳನ್ನು ಪ್ರದರ್ಶನ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

Related Posts

ರಾಜ್ಯದ ಶಕ್ತಿಕೇಂದ್ರಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ! ಯು.ಟಿ. ಖಾದರ್’ಗೆ ಅಭಿನಂದನೆ‌ ತಿಳಿಸಿದ ಸಿದ್ದರಾಮಯ್ಯ

ವಿಧಾನಸೌಧಕ್ಕೆ ಇದೀಗ ಸರಕಾರವು 5 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ವಿದ್ಯುತ್‌ ದೀಪಾಲಂಕಾರದ…