Gl
ರಾಜ್ಯ ವಾರ್ತೆ

ಬಸ್ ನಿಲ್ಲಿಸಿ, ಬಸ್’ನಲ್ಲೇ ನಮಾಜ್: ಕೆ.ಎಸ್.ಆರ್.ಟಿ.ಸಿ. ಚಾಲಕ ಅಮಾನತು!

ಈ ಸುದ್ದಿಯನ್ನು ಶೇರ್ ಮಾಡಿ

ಪ್ರಯಾಣಿಕರು ಇರುವಾಗಲೇ KSRTC ಬಸ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಬಸ್ ನಲ್ಲೇ ನಮಾಜ್ ಮಾಡಿದ್ದ ಚಾಲಕನನ್ನು ಅಮಾನತು ಮಾಡಲಾಗಿದೆ.

rachana_rai
Pashupathi
akshaya college
Balakrishna-gowda

ಏಪ್ರಿಲ್ 29ರಂದು ಹುಬ್ಬಳ್ಳಿಯಿಂದ ಹಾವೇರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದೆ.

pashupathi

ಬಸ್ ಚಾಲಕ ಕಮ್ ನಿರ್ವಾಹಕ ಎಆರ್ ಮುಲ್ಲಾ ಬಸ್ ನಲ್ಲೇ ನಮಾಜ್ ಮಾಡುತ್ತಿರುವ ವಿಡಿಯೊವನ್ನು ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಚಿತ್ರಿಸಿ ಸಾಮಾಜಿಕ ಜಲಾತಾಣಗಳಲ್ಲಿ ಹರಿಬಿಟ್ಟಿದ್ದರು.

ಈ ವಿಡಿಯೋ ವ್ಯಾಪಕ ವೈರಲ್ ಆಗಿದ್ದು ಚಾಲಕನ ನಡೆಗೆ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಚಾಲಕನ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದರು. ಈ ಘಟನೆ ನಂತರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ತನಿಖೆಗೆ ಆದೇಶಿಸಿದ್ದರು. ಇದೀಗ ಹಾನಗಲ್ KSRTC ಘಟಕದ ಚಾಲಕ ಎಆರ್ ಮುಲ್ಲಾನನ್ನು ಕರ್ತವ್ಯಲೋಪ ಅಡಿಯಲ್ಲಿ ಕೆಲಸದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಮಂಗಳವಾರ ಅಂದರೆ ಏಪ್ರಿಲ್ 29ರಂದು ಸಂಜೆ ಹುಬ್ಬಳ್ಳಿಯಿಂದ ಹಾವೇರಿಗೆ ಹೋಗುವ ಬಸ್​ನ ಚಾಲಕ-ಕಂ-ನಿರ್ವಾಹಕ ಎಆರ್ ಮುಲ್ಲಾ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದಾರೆ. ಚಾಲಕ-ಕಂ-ನಿರ್ವಾಹಕ ನಮಾಜ್​ ಮಾಡುತ್ತಿರುವುದನ್ನು ಪ್ರಯಾಣಿಕರೊಬ್ಬರು ಮೊಬೈಲ್​ ಕ್ಯಾಮೆರಾದಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಈ ವಿಡಿಯೋ ಸಾಕಷ್ಟು ವೈರಲ್​ ಆಗುತ್ತಿದ್ದಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ. ಅವರಿಗೆ ಪತ್ರ ಬರೆದು ತನಿಖೆಗೆ ಆದೇಶಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಬೀದಿನಾಯಿಗಳಿಗೂ ಬಾಡೂಟದ ಭಾಗ್ಯ! ಬೀದಿನಾಯಿಗಳಿಗೆ ಕಾಳಜಿ ವ್ಯಕ್ತಪಡಿಸಿದ ಟೆಂಡರ್ ಕರೆದ ರಾಜ್ಯ ಸರಕಾರ!!

ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸ್ಥಳೀಯ ಸಂಸ್ಥೆಯಿಂದ…