ಬೆಂಗಳೂರು: ನವ ವಧುವಿನ ಕುಂಕುಮ ಅಳಿಸಿದ್ದ ಪಾಕಿಸ್ತಾನಕ್ಕೆ ಭಾರತ ಇಂದು ಮುಂಜಾನೆ ಮರ್ಮಾಘಾತ ನೀಡಿದೆ. ಸದ್ಯ ಪ್ರತೀಕಾರ ತೀರಿಸಿಕೊಂಡ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸಲಾಗುತ್ತಿದೆ. ಆದರೆ ಈ ಹೊತ್ತಲ್ಲೇ ಕರ್ನಾಟಕ ಕಾಂಗ್ರೆಸ್ ಶಾಂತಿ ಮಂತ್ರ ಪಠಿಸಿ, ಕೆಂಗಣ್ಣಿಗೆ ಗುರಿಯಾಗಿದೆ.
ಗಾಂಧೀಜಿಯ ಭಾವಚಿತ್ರ ಹಾಕಿ, ಅದರಲ್ಲಿ ಶಾಂತಿ ಮಂತ್ರ ಪಠಿಸಿದ ಪೋಸ್ಟ್ ಟ್ವೀಟ್ ಮಾಡಿದೆ. ಇದಕ್ಕೆ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಾಂಗ್ರೆಸ್ ತನ್ನ ಟ್ವೀಟನ್ನು ಡಿಲೀಟ್ ಮಾಡಿದೆ.
ಉಗ್ರರ ವಿರುದ್ಧ ಆಪರೇಷನ್ ಸಿಂಧೂರ್ ಮೂಲಕ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಹೀಗಿರುವಾಗಲೇ ರಾಜ್ಯ ಕಾಂಗ್ರೆಸ್ ‘ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ’ ಎಂದು ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಆದರೆ ಕೆಲವೇ ಕ್ಷಣದಲ್ಲಿ ಕಾಂಗ್ರೆಸ್ಸಿಗರು ಸೇರಿದಂತೆ ಜನರು ತೀವ್ರ ಕಿಡಿಕಾರಿದ್ದರು. ವ್ಯಾಪಕ ಆಕ್ರೋಶ ಬೆನ್ನಲ್ಲೇ ಕಾಂಗ್ರೆಸ್ ಆ ಟ್ವೀಟ್ನ್ನು ಡಿಲೀಟ್ ಮಾಡಿದೆ. ಬಳಿಕ ಭಾರತೀಯ ಸೇನೆಯನ್ನು ಹೊಗಳುವ ಮೂಲಕ ಮತ್ತೊಂದು ಹೊಸ ಟ್ವೀಟ್ ಮಾಡಿದೆ.