tamanvi
ರಾಜ್ಯ ವಾರ್ತೆ

ಶಾಂತಿ ಮಂತ್ರ ಜಪಿಸಿದ ಕರ್ನಾಟಕ ಕಾಂಗ್ರೆಸ್: ಕಾಂಗ್ರೆಸಿಗರಿಂದಲೂ ಆಕ್ರೋಶ

ನವ ವಧುವಿನ ಕುಂಕುಮ ಅಳಿಸಿದ್ದ ಪಾಕಿಸ್ತಾನಕ್ಕೆ ಭಾರತ ಇಂದು ಮುಂಜಾನೆ ಮರ್ಮಾಘಾತ ನೀಡಿದೆ. ಸದ್ಯ ಪ್ರತೀಕಾರ ತೀರಿಸಿಕೊಂಡ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸಲಾಗುತ್ತಿದೆ. ಆದರೆ ಈ ಹೊತ್ತಲ್ಲೇ ಕರ್ನಾಟಕ ಕಾಂಗ್ರೆಸ್ ಶಾಂತಿ ಮಂತ್ರ ಪಠಿಸಿ, ಕೆಂಗಣ್ಣಿಗೆ ಗುರಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ನವ ವಧುವಿನ ಕುಂಕುಮ ಅಳಿಸಿದ್ದ ಪಾಕಿಸ್ತಾನಕ್ಕೆ ಭಾರತ ಇಂದು ಮುಂಜಾನೆ ಮರ್ಮಾಘಾತ ನೀಡಿದೆ. ಸದ್ಯ ಪ್ರತೀಕಾರ ತೀರಿಸಿಕೊಂಡ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸಲಾಗುತ್ತಿದೆ. ಆದರೆ ಈ ಹೊತ್ತಲ್ಲೇ ಕರ್ನಾಟಕ ಕಾಂಗ್ರೆಸ್ ಶಾಂತಿ ಮಂತ್ರ ಪಠಿಸಿ, ಕೆಂಗಣ್ಣಿಗೆ ಗುರಿಯಾಗಿದೆ.

ಗಾಂಧೀಜಿಯ ಭಾವಚಿತ್ರ ಹಾಕಿ, ಅದರಲ್ಲಿ ಶಾಂತಿ ಮಂತ್ರ ಪಠಿಸಿದ ಪೋಸ್ಟ್ ಟ್ವೀಟ್ ಮಾಡಿದೆ. ಇದಕ್ಕೆ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಾಂಗ್ರೆಸ್​ ತನ್ನ ಟ್ವೀಟನ್ನು ಡಿಲೀಟ್ ಮಾಡಿದೆ.

ಉಗ್ರರ ವಿರುದ್ಧ ಆಪರೇಷನ್​ ಸಿಂಧೂರ್ ಮೂಲಕ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಹೀಗಿರುವಾಗಲೇ ರಾಜ್ಯ ಕಾಂಗ್ರೆಸ್​ ‘ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ’ ಎಂದು ಟ್ವೀಟ್​ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಆದರೆ ಕೆಲವೇ ಕ್ಷಣದಲ್ಲಿ ಕಾಂಗ್ರೆಸ್ಸಿಗರು ಸೇರಿದಂತೆ ಜನರು ತೀವ್ರ ಕಿಡಿಕಾರಿದ್ದರು. ವ್ಯಾಪಕ ಆಕ್ರೋಶ ಬೆನ್ನಲ್ಲೇ ಕಾಂಗ್ರೆಸ್​ ಆ ಟ್ವೀಟ್​​ನ್ನು ಡಿಲೀಟ್​ ಮಾಡಿದೆ. ಬಳಿಕ ಭಾರತೀಯ ಸೇನೆಯನ್ನು ಹೊಗಳುವ ಮೂಲಕ ಮತ್ತೊಂದು ಹೊಸ ಟ್ವೀಟ್ ಮಾಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಾಲ್ಮೀಕಿ ನಿಗಮ ಹಗರಣ: ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆ.21ರಂದು ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ

ಪುತ್ತೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ…