ರಾಜ್ಯ ವಾರ್ತೆ

ಅಂಗವಿಕಲರ ಜನಗಣತಿ: ದೇಶದಲ್ಲೇ ಪ್ರಥಮ ಪ್ರಯತ್ನವಾಗಿ ಕರ್ನಾಟಕ ಆಯ್ಕೆ!

ಈ ಸುದ್ದಿಯನ್ನು ಶೇರ್ ಮಾಡಿ

ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಂಗವಿಕಲರ ಜನಗಣತಿ ನಡೆಸಲು ನಿರ್ಧರಿಸಲಾಗಿದೆ.

Shani-pooja

ಪ್ರಸಕ್ತ ವರ್ಷದಿಂದಲೇ ಈ ಕಾರ್ಯಕ್ರಮವನ್ನು ಕೈಗೊಳ್ಳಲಾಗುವುದು ಎಂದು ಅಂಗವಿಕಲರ ಹಕ್ಕು ಅಧಿನಿಯಮ ಅನುಷ್ಠಾನದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಹೇಳಿದ್ದಾರೆ.

ಬುಧವಾರ ಜಿಲ್ಲೆಯ ವಿಆರ್​ಡಬ್ಲ್ಯೂ, ಎಂಆರ್​ಡಬ್ಲ್ಯೂಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಗ್ಗೆ ಒಂಬತ್ತು ತಿಂಗಳ ಹಿಂದೆಯೇ ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿತ್ತು ಎಂದು ತಿಳಿಸಿದ್ದಾರೆ.

ಈ ಅಂಗವಿಕಲರ ಜನಗಣತಿಯ ದತ್ತಾಂಶವು ಅಂಗವಿಕಲರ ಸಬಲೀಕರಣಕ್ಕಾಗಿ ಕಾರ್ಯಕ್ರಮ ಕೈಗೊಳ್ಳಲು ಸಹಕಾರಿಯಾಗಲಿದೆ. ಸಿಎಂ ಸಿದ್ದರಾಮಯ್ಯ ಕೂಡ ಈ ವರ್ಷದ ಬಜೆಟ್‌ನಲ್ಲಿ ಅಂಗವಿಕಲರ ಸಮೀಕ್ಷೆ ನಡೆಸುವ ಬಗ್ಗೆ ಘೋಷಿಸಿದ್ದಾರೆ. ಈ ಜನಗಣತಿ ಕಾರ್ಯಕ್ಕೆ ವಿಆರ್​ಡಬ್ಲ್ಯೂ, ಎಂಆರ್​ಡಬ್ಲ್ಯೂಗಳಿಗೆ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಇನ್ನು ಈಗಾಗಲೇ ಎಷ್ಟು ಜನ ಅಂಗವಿಕಲರು ಯುಡಿಐಡಿ ಕಾರ್ಡ್ ಪಡೆದುಕೊಂಡಿದ್ದಾರೆ, ಬಾಕಿ ಎಷ್ಟು ಕಾರ್ಡ್​​ ಇದೆ, ಎಷ್ಟು ಜನರಿಗೆ ಅಂಗವಿಕಲರ ಮಾಸಾಶನ ತಲುಪುತ್ತಿದೆ ಎಂಬ ಎಲ್ಲಾ ಮಾಹಿತಿ ಸೇರಿದಂತೆ ಇತರೆ ಮಾಹಿತಿಯನ್ನು ಮನೆ ಮನೆಗೆ ಭೇಟಿ ನೀಡಿ ಸಂಗ್ರಹಿಸಲಾಗುವುದು ಎಂದಿದ್ದಾರೆ.

ಇನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕನಿಷ್ಟ ಎರಡು ಅಂಗವಿಕಲರ ಸ್ವ-ಸಹಾಯ ಗುಂಪುಗಳನ್ನು ಶೀಘ್ರವೇ ರಚನೆ ಮಾಡಲಾಗುವುದು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಬೇಕಿದೆ. ಮುಂದಿನ ದಿನಗಳಲ್ಲಿ ಸುಗಮ್ಯ ಯಾತ್ರೆಯನ್ನು ಕೈಗೊಳ್ಳಲಾಗುವುದು, ಜೊತೆಗೆ ಅಂಗವಿಕಲರ ಸಬಲೀಕರಣಕ್ಕಾಗಿ ಉತ್ತಮ ಸಮೀಕ್ಷೆ ನಡೆಸಬೇಕು ಎಂದು ದಾಸ್ ಸೂರ್ಯವಂಶಿ ಹೇಳಿದ್ದಾರೆ.

ಒಳಮೀಸಲಾತಿ ಜಾರಿಗಾಗಿ ಸರ್ಕಾರದ ಮೊದಲ ಹೆಜ್ಜೆ:

ಇತ್ತೀಚೆಗೆ ಒಳಮೀಸಲಾತಿ ಬಗ್ಗೆ ನಿಖರವಾದ ವರದಿ ಕೊಡಲು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಗಣತಿಯನ್ನು ಕರ್ನಾಟಕ ಸರ್ಕಾರ ಆರಂಭಿಸಿತ್ತು. ಒಳಮೀಸಲಾತಿಯ ಮೊದಲ ಹೆಜ್ಜೆ ಎನ್ನುವಂತೆ ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಆರಂಭವಾಗಿದೆ. ಆ ಮೂಲಕ ಸಾಮಾಜಿಕ ತಾರತಮ್ಯಕ್ಕೆ ಗುರಿಯಾಗಿರುವ ಕೆಲವು ಸಮುದಾಯಗಳಿಗೆ ಬಲ ನೀಡಲು ಮುಂದಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts