ರಾಜ್ಯ ವಾರ್ತೆ

ಕಳ್ಳತನ ಮಾಡಿ ವಿದ್ಯಾರ್ಥಿಗಳ ಫೀಸ್ ಕಟ್ಟಿದ! ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದವನಿಗೆ ಕಳ್ಳನಾಗಲು ಸಿಕ್ಕಿತು ಸ್ಫೂರ್ತಿ!!

ಬೆಂಗಳೂರು ಪೊಲೀಸರ ಪ್ರಮುಖ ಕಾರ್ಯಾಚರಣೆಯಲ್ಲಿ ಖತರ್ನಾಕ್ ಮನೆಗಳ್ಳರನ್ನು ಬಂಧಿಸಿದ್ದು, ಈ ಪೈಕಿ ಓರ್ವ ಕಳ್ಳ ತಾನು ಕದ್ದಿದ್ದ ಹಣದಲ್ಲಿ 20 ವಿದ್ಯಾರ್ಥಿಗಳ ಶಾಲಾ-ಕಾಲೇಜು ಫೀಸ್ ಕಟ್ಟಿದ್ದ ಅಚ್ಚರಿ ವಿಚಾರ ಬೆಳಕಿಗೆ ಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಪೊಲೀಸರ ಪ್ರಮುಖ ಕಾರ್ಯಾಚರಣೆಯಲ್ಲಿ ಖತರ್ನಾಕ್ ಮನೆಗಳ್ಳರನ್ನು ಬಂಧಿಸಿದ್ದು, ಈ ಪೈಕಿ ಓರ್ವ ಕಳ್ಳ ತಾನು ಕದ್ದಿದ್ದ ಹಣದಲ್ಲಿ 20 ವಿದ್ಯಾರ್ಥಿಗಳ ಶಾಲಾ-ಕಾಲೇಜು ಫೀಸ್ ಕಟ್ಟಿದ್ದ ಅಚ್ಚರಿ ವಿಚಾರ ಬೆಳಕಿಗೆ ಬಂದಿದೆ.

akshaya college

ಕಳ್ಳತನ ಮಾಡಿದ್ದ ಹಣದಲ್ಲಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ್ದ ಖತರ್ನಾಕ್ ಮನೆಗಳ್ಳರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೇಗೂರು ನಿವಾಸಿ ಶಿವು ಅಲಿಯಾಸ್ ಶಿವರಪ್ಪನ್, ಆತನ ಸ್ನೇಹಿತರಾದ ಅನಿಲ್ ಅಲಿಯಾಸ್ ಜಗ್ಗ ಮತ್ತು ವಿವೇಕ್‌ ಎಂದು ಗುರುತಿಸಲಾಗಿದೆ.

ಈ ಮೂವರ ಪೈಕಿ ಶಿವು ಅಲಿಯಾಸ್ ಶಿವರಪ್ಪನ್ ಈ ಗ್ಯಾಂಗ್ ನ ಮಾಸ್ಟರ್ ಮೈಂಡ್ ಆಗಿದ್ದು, ಹೆಂಡತಿ, ಮಕ್ಕಳಿಲ್ಲದ ಶಿವು ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸುತ್ತಿದ್ದಾಗ ಏರಿಯಾದಲ್ಲಿ ಸ್ನೇಹಿತರು ಮಕ್ಕಳ ಸ್ಕೂಲ್ ಫೀಸ್ ಕಟ್ಟಲು ಪರದಾಡುತ್ತಿರುವುದನ್ನು ನೋಡಿದ್ದ.

ಬಳಿಕ ಶಿವು ಬ್ಯಾಡರಹಳ್ಳಿ ಸೇರಿದಂತೆ ಹಲವೆಡೆ ಮನೆಗಳಿಗೆ ಕನ್ನ ಹಾಕಿದ್ದು, ಕದ್ದ ಚಿನ್ನಾಭರಣವನ್ನು ಸ್ನೇಹಿತರಾದ ಅನಿಲ್ @ ಜಗ್ಗ ಮತ್ತು ವಿವೇಕ್‌ನ ಸಹಾಯದಿಂದ ಮಾರಾಟ ಮಾಡುತ್ತಿದ್ದ. ಹೀಗೆ ಮಾರಾಟ ಮಾಡಿದ ಹಣವನ್ನು ತಂದು ವಿದ್ಯಾರ್ಥಿಗಳ ಶಾಲಾ-ಕಾಲೇಜು ಫೀಸ್ ಕಟ್ಟುತ್ತಿದ್ದ ಎನ್ನಲಾಗಿದೆ.

ಸ್ನೇಹಿತರಿಗೂ ನೆರವು

ಪೊಲೀಸ್ ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ 22 ಲಕ್ಷಕ್ಕೆ ಚಿನ್ನ ಮಾರಾಟ ಮಾಡಿಸಿದ್ದ ಶಿವು ಬಂದ ಹಣದಲ್ಲಿ ವಿವೇಕ್‌ಗೆ 4 ಲಕ್ಷ, ಅನಿಲ್‌ಗೆ 4 ಲಕ್ಷ ರೂ. ಮೌಲ್ಯದ ಆಟೋ ಕೊಡಿಸಿದ್ದ. ಉಳಿದ 14 ಲಕ್ಷ ರೂ. ಹಣದಲ್ಲಿ ಏರಿಯಾದ 20 ಮಕ್ಕಳಿಗೆ ಶಾಲಾ ಹಾಗೂ ಕಾಲೇಜು ಫೀಸ್ ಕಟ್ಟಿದ್ದಾನೆ.

ಮನೆಗಳ್ಳರ ಬೆನ್ನತ್ತಿದ್ದ ಬ್ಯಾಡರಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶಿವು, ಅನಿಲ್ ಹಾಗು ವಿವೇಕ್‌ನನ್ನು ಬಂಧಿಸಿದ ಪೊಲೀಸರು 24 ಲಕ್ಷ ರೂ. ಮೌಲ್ಯದ 260 ಗ್ರಾಂ ಚಿನ್ನದ ಗಟ್ಟಿಯನ್ನು ಸೀಜ್ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts