Gl
ರಾಜ್ಯ ವಾರ್ತೆ

108 ಆ್ಯಂಬುಲೆನ್ಸ್ ಸೇವೆ ಬಲಪಡಿಸಲು ಹೊಸ ಯೋಜನೆ!! ಆಶಾ ಮೆಂಟರ್ಸ್ ಜವಾಬ್ದಾರಿ ಆರೋಗ್ಯ ಕೇಂದ್ರದ ಸಿಬಂದಿ ಹೆಗಲಿಗೆ!

108 ಆರೋಗ್ಯ ಕವಚ ಸೇವೆಯನ್ನು ಜಿವಿಕೆ ಸಂಸ್ಥೆಯಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿರ್ವಹಿಸಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: 108 ಆರೋಗ್ಯ ಕವಚ ಸೇವೆಯನ್ನು ಜಿವಿಕೆ ಸಂಸ್ಥೆಯಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿರ್ವಹಿಸಲಿದೆ.

Pashupathi

ರಾಜ್ಯದಲ್ಲಿ 108 ಆ್ಯಂಬುಲೆನ್ಸ್‌ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ, ಈ ಸೇವೆಯನ್ನು ನಿಯಂತ್ರಿಸುವ ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸುವ ಮೂಲಕ “ಆರೋಗ್ಯ ಕವಚ’ ಸೇವೆ ಬಲಪಡಿಸಲಾಗುವುದು ಎಂಬ ಘೋಷಣೆ ಅನುಷ್ಠಾನಕ್ಕೆ ರಾಜ್ಯದಲ್ಲಿ 108-ಆರೋಗ್ಯ ಕವಚ ಸೇವೆಯನ್ನು ಒಡಂಬಡಿಕೆಯ ಪಾಲುದಾರರಾದ ಜಿವಿಕೆ-ಇಎಂಆರ್‌ಐ ಸಂಸ್ಥೆಯಿಂದ ಹಿಂಪಡೆಯಬೇಕು. ಈ ಸೇವೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲು ಸರಕಾರದ ವತಿಯಿಂದ ರಾಜ್ಯ ಮಟ್ಟ ದಲ್ಲಿ 112 ಎನ್‌ಜಿ ಇಆರ್‌ಎಸ್‌ಎಸ್‌ ತಂತ್ರಾಂಶವನ್ನು ಬಳಸಿಕೊಂಡು ಕಮಾಂಡ್ ಅಂಡ್ ಕಂಟ್ರೋಲ್ ಸೆಂಟ‌ರ್ ಅನ್ನು ಸ್ಥಾಪಿಸಲು ಹಾಗೂ ಜಿಲ್ಲಾಡಳಿತದ ಮೂಲಕ ಆ್ಯಂಬುಲೆನ್ಸ್ ಗಳ ನಿರ್ವಹಿಸಲು ಅನುಮೋದಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನ ಅನುಮೋದಿತ ಅನುದಾನದ ಮಿತಿಯೊಳಗೆ ಅನುಷ್ಠಾನಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

akshaya college

ಯೋಜನೆಯ ಅನುಷ್ಠಾನಕ್ಕೆ ಅಗತ್ಯವಿರುವ ಮಾನವ ಸಂಪನ್ಮೂಲ ಪಡೆಯಲು ಪ್ರತ್ಯೇಕ ಪ್ರಸ್ತಾವನೆ ಹಾಗೂ ಕೇಂದ್ರ ಸರಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದಡಿಯಲ್ಲಿನ ಸಿ-ಡಿಎಸಿ ತಿರುವಂತಪುರಂ ಸಂಸ್ಥೆಯ ಜತೆ ಒಡಂಬಡಿಕೆ ಮಾಡಿಕೊಂಡು 112 ಎನ್‌ಜಿ-ಇಆರ್‌ಎಸ್‌ಎಸ್‌ ತಂತ್ರಾಂಶ ಬಳಸಿಕೊಂಡು 108-ಆರೋಗ್ಯ ಕವಚ ಹಾಗೂ 104-ಆರೋಗ್ಯ ಸಹಾಯವಾಣಿ ಕಾರ್ಯಕ್ರಮಗಳ ಕೇಂದ್ರೀಕೃತ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಅನ್ನು 5 ವರ್ಷಗಳ ಅವಧಿಗೆ ಸ್ಥಾಪಿಸಲು ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಬೇಕು. ಯೋಜನೆಯ ಅನುಷ್ಠಾನಕ್ಕೆ ವಿವರವಾದ ಕ್ರಿಯಾ ಯೋಜನೆ ಸಿದ್ಧಪಡಿಸಿ ಸಕ್ಷಮ ಪ್ರಾಧಿಕಾರದಿಂದ ಹಾಗೂ ಆಡಳಿತಾತ್ಮಕ ಅನುಮೋದನೆ ಪಡೆಯಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಸರಕಾರದ ಬೊಕ್ಕಸಕ್ಕೆ 250 ಕೋ. ರೂ.

108 ಆ್ಯಂಬುಲೆನ್ಸ್‌ಗಳನ್ನು ಆರೋಗ್ಯ ಇಲಾಖೆಯಿಂದ ನಿರ್ವಹಿಸುವ ಕ್ರಮದಿಂದಾಗಿ ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ವಿಶ್ವಾಸವಿದೆ.

ಜತೆಗೆ ಸರಕಾರದ ಬೊಕ್ಕಸಕ್ಕೆ 250 ಕೋ. ರೂ. ಯಷ್ಟು ಉಳಿತಾಯವಾಗಲಿದೆ. 108 ಅಧೀನದಲ್ಲಿರುವ ಒಟ್ಟು 715 ಆ್ಯಂಬುಲೆನ್ಸ್‌ ನಿರ್ವಹಣೆಗಾಗಿ ರಾಜ್ಯ ಮಟ್ಟದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲಾಗುವುದು.

ಚಾಲಕರು ಹಾಗೂ ನರ್ಸ್ ಸಿಬಂದಿಯನ್ನು ಜಿಲ್ಲೆ ಮಟ್ಟದಲ್ಲಿಯೇ ಹೊರಗುತ್ತಿಗೆಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಆರಂಭದಲ್ಲಿ ಚಾಮರಾಜ ನಗರ ಜಿಲ್ಲೆಯಲ್ಲಿ ನಿರ್ವಹಣೆ ಪ್ರಾರಂಭಿಸಲಾಗುತ್ತಿದೆ. ನಂತರದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರ್ವಹಣೆ ಕಾರ್ಯ ಆರಂಭವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ ತಿಳಿಸಿದ್ದಾರೆ.

ಆಶಾ ಮೆಂಟರ್ಸ್ ಜವಾಬ್ದಾರಿ ಆರೋಗ್ಯ ಕೇಂದ್ರದ ಸಿಬಂದಿ ಹೆಗಲಿಗೆ

ಬೆಂಗಳೂರು: ಆಶಾ ಮೆಂಟರ್ಸ್ ನಿರ್ವಹಿಸುತ್ತಿದ್ದ ಜವಾಬ್ದಾರಿಗಳನ್ನು ಇನ್ನು ಮುಂದೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮಟ್ಟದಲ್ಲಿ ಮಹಿಳಾ ಆರೋಗ್ಯ ಸಂದರ್ಶಕರು ಅಥವಾ ಹಿರಿಯ ಆರೋಗ್ಯ ನಿರೀಕ್ಷಣ ಅಧಿಕಾರಿಗಳು ಹಾಗೂ ಉಪಕೇಂದ್ರಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಅಥವಾ ಸಮುದಾಯ ಆರೋಗ್ಯ ಅಧಿಕಾರಿಗಳು ನಿರ್ವಹಿಸುವಂತೆ ಸರಕಾರವು ಆದೇಶಿಸಿದೆ.

ರಾಜ್ಯದ 195 ಆಶಾ ಮೆಂಟರ್ಸ್ ಆಗಿ ಎನ್‌ಎಚ್‌ಎಂ ಅಡಿಯಲ್ಲಿ ಶುಶೂಷಕರ ಅರ್ಹತೆಯಿರುವ ಗುತ್ತಿಗೆ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವವರನ್ನು ಕರ್ತವ್ಯದಿಂದ ಮುಕ್ತಗೊಳಿಸಿದೆ. ಇವರನ್ನು ಅರ್ಹರಿದ್ದಲ್ಲಿ ಆಯಾ ಜಿಲ್ಲೆ ಗಳಲ್ಲಿ ಎನ್‌ಎಚ್‌ಎಂ ಅಡಿ ಖಾಲಿ ಇರುವ ಶುಶೂಷಕರ ಹುದ್ದೆಗಳಿಗೆ ಗುತ್ತಿಗೆ ನೌಕರರಾಗಿ ಆದ್ಯತೆ ಮೇಲೆ ನೇಮಿಸಲು ಪರಿಗಣಿಸಬಹುದಾಗಿದೆ ಎಂದು ಉಲ್ಲೇಖಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ವೀಡಿಯೋ: ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಚೈತ್ರಾ ಕುಂದಾಪುರ ತಂದೆ! ಸುಳ್ಳಿನ ಮೇಲೆ ಸುಳ್ಳು ಹೇಳಿದ್ಯಾಕೆ ಬಾಲಕೃಷ್ಣ!

ಚೈತ್ರಾ ಬಿಗ್ ಬಾಸ್ಗೆ ಹೋದ ಸಂದರ್ಭದಲ್ಲಿ ಬಾಲಕೃಷ್ಣ ಅವರು ವಿಶ್ ಮಾಡಿದ್ದ ವಿಡಿಯೋ ಒಂದು ಈಗ…

ದ್ವೇಷ ಭಾಷಣ, ಪ್ರಚೋದನಾಕಾರಿ ಪೋಸ್ಟ್‌ ವಿರುದ್ಧ ಕಠಿಣ ಕಾನೂನು | ಡಿಸಿ, ಸಿಇಓಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ದ್ವೇಷ ಭಾಷಣ-ಪ್ರಚೋದನಾಕಾರಿ ಪೋಸ್ಟ್‌, ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ…